ಮಹಾಲಕ್ಷ್ಮಿ ಅಲಂಕಾರದಲ್ಲಿ ಭಕ್ತರಿಗೆ ದರುಶನ ಕೊಟ್ಟ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ

ನಂದಿನಿ ಮನುಪ್ರಸಾದ್ ನಾಯಕ್

ತುಂತುರು ಮಳೆ ಹಿಮದ ನಡುವೆ ಚಾಮುಂಡಿಬೆಟ್ಟದಲ್ಲಿ ಹೂವೂಗಳು ತಳಿರು ತೋರಣ,ದೀಪಾಲಂಕಾರ ಭಕ್ತರನ್ನ ಸ್ವಾಗತಿಸುತ್ತಿತ್ತು.

ಮೊದಲ ಆಷಾಢ ಶುಕ್ರವಾರ ನಾಡ ಅಧಿದೇವಿ ಚಾಮುಂಡೇಶ್ವರಿ ತಾಯಿಗೆ ಮುಂಜಾನೆ ದೇವಿಗೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಭಕ್ತರಿಗೆ ದರ್ಶನ ನೀಡಿದರು.

ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಭಕ್ತರಿಗೆ ನಾಡದೇವಿಯ ದರುಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು.

ಭಕ್ತರ ಅನುಕೂಲಕ್ಕಾಗಿ 300, 2 ಸಾವಿರ ಟಿಕೇಟ್ ವ್ಯವಸ್ಥೆ ಮಾಡಲಾಗಿದೆ.2000 ಟಿಕೇಟ್ ಪಡೆದವರಿಗೆ ಲಲಿತ ಮಹಲ್ ಯಿಂದ ಬೆಟ್ಟಕ್ಕೆ ಎಸಿ ಬಸ್ ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ,ಲಾಡು,ಕುಡಿಯುವ ನೀರಿನ ಬಾಟಲ್ ,ಒಂದು ಬ್ಯಾಗ್ ವಿತರಿಸಲಾಯಿತು.ಮುತೈದೆಯರಿಗೆ ಮಡಿಲು ಅಕ್ಕಿ ನೀಡಲಾಯಿತು. ಬೆಟ್ಟ ಹತ್ತಿಬಂದವರಿಗೆ ಪ್ರತ್ಯೇಕ ಗೇಟ್ ನಿಗಧಿ ಮಾಡಲಾಗಿತ್ತು.ಪ್ರತಿವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಸಚಿವರು,ಶಾಸಕರು,ಸಂಸದರು ,ಅಧಿಕಾರಿಗಳು ದೇವರ ದರ್ಶನ ಪಡೆದರು.ರಾತ್ರಿ 10ಗಂಟೆವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *