ಬೆಂಗಳೂರು:19 ಜುಲೈ 2022
ನಂದಿನಿ ಮೈಸೂರು
ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ 2022 ಅದ್ದೂರಿಯಾಗಿ ನಡೆಸಲು ಸರ್ಕಾರ ತೀರ್ಮಾನಿಸಿದೆ.
ನಾಡಹಬ್ಬ ದಸರಾ ಆಚರಣೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಅದ್ದೂರಿ ದಸರಾ ಮಹೋತ್ಸವಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಅದ್ದೂರಿಯಾಗಿ ನಡೆಸಲು ನಿರ್ಧರಿಸಿದ್ದೇವೆ. ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ 5ರಂದು ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.
ಈ ಬಾರಿ ದಸರಾ ಬಗ್ಗೆ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ.ಸ್ಥಳೀಯ ಕಲಾಕಾರರಿಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ನಿರ್ಧರಿಸಿದ್ದೇವೆ ಎಂದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಜಿಟಿ ದೇವೇಗೌಡ, ಪ್ರತಾಪ್ ಸಿಂಹ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತನ್ವೀರ್ ಸೇಠ್, ಸಾರಾ ಮಹೇಶ್, ಹರ್ಷವರ್ಧನ್, ರಾಮ್ ದಾಸ್, ಪರಿಷತ್ ಸದಸ್ಯ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ, ಮೈಸೂರು ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಹಿರಿಯ ಅಧಿಕಾರಿಗಳು, ಮೈಸೂರು, ಮಂಡ್ಯ ಭಾಗದ ಜನಪ್ರತಿನಿಧಿಗಳು ಭಾಗಿಯಾಗಿದ್ದರು.