ನಂದಿನಿ ಮೈಸೂರು
ಕರ್ನಾಟಕ ರತ್ನ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ಸವಿ ನೆನಪಿನಲ್ಲಿ
ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ ೪೩ರ ತೊಣಚಿಕೊಪ್ಪಲಿನಲ್ಲಿ ಉಚಿತ
ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಷ್ಪನಮನ ನಮನ ಸಲ್ಲಿಸಿ ಶಿಬಿರಕ್ಕೆ
ಚಾಲನೆ ನೀಡಿದರು.ನಂತರ
ವಿವಿಧ ಯೋಜನೆಗಳಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಆದೇಶ ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು.
ಬೆಳಗ್ಗೆ 10 ಗಂಟೆಯಿಂದ ಆರಂಭವಾದ ಆರೋಗ್ಯ ತಪಾಸಣಾ ಶಿಬಿರ ಮಧ್ಯಾಹ್ನ 2 ಗಂಟೆಗೆ ಅಂತ್ಯಗೊಂಡಿತು.43 ನೇ ವಾರ್ಡಿನ ನಿವಾಸಿಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣಾ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಔಷಧಿ ಪಡೆದುಕೊಂಡರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ 43 ನೇ ವಾರ್ಡಿನ ನಗರ ಪಾಲಿಕೆ ಸದಸ್ಯ ಜೆ.ಗೋಪಿ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಮುಖಂಡ ಕೆ.ಹರೀಶ್ ಗೌಡ, ಮಾಜಿ ಮೇಯರ್ ಚಿಕ್ಕಣ,ಪುಷ್ಪಲತಾ ಚಿಕ್ಕಣ್ಣ, ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಯೋಗಣ್ಣ ಮತ್ತಿತರರು ಹಾಜರಿದ್ದರು.