ಸಿದ್ದರಾಮಯ್ಯರವರ 75 ವರ್ಷದ ಬಾಲ್ಯ,ವಿದ್ಯಾಭ್ಯಾಸ,ರಾಜಕೀಯ ಹೇಗಿತ್ತು? ಮತ್ತೊಮ್ಮೆ ಸಿಎಂ ಆಗ್ತಾರಾ ಸಿದ್ದರಾಮಯ್ಯ?

ಸ್ಪೇಷಲ್ ವರದಿ: ನಂದಿನಿ ಮೈಸೂರು

2023 ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆಯ್ಕೆಯಾಗಿದ್ದು ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.ಆದರೆ ಕಾಂಗ್ರೆಸ್ ಹೃಕಮಾಂಡ್ ಯಾರಾಗ್ತಾರೆ ಸಿಎಂ ಎಂಬ ಅಧಿಕೃತ ಆದೇಶ ಹೊರಡಿಸಿಲ್ಲ.

ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ ೧೯೪೮ರ ಆಗಸ್ಟ್ ೧೨ ರಂದು ಜನಿಸಿದರು. ಇವರ ತಂದೆ ಸಿದ್ಧರಾಮೇಗೌಡ, ತಾಯಿ-ಬೋರಮ್ಮ. ಇವರದು ತುಂಬು ಮನೆಯ ಅವಿಭಕ್ತ ಕುಟುಂಬ. ಚಿಕ್ಕಂದಿನಲ್ಲೇ ಜಾನಪದ ನೃತ್ಯ ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ನೃತ್ಯಗಳನ್ನು ಕಲಿತಿದ್ದಾರೆ. ಹತ್ತನೇ ವರ್ಷದವರೆಗೆ ಇವರು ಶಾಲೆಗೇ ಹೋಗಿರಲಿಲ್ಲ. ನೇರವಾಗಿ ಐದನೇ ತರಗತಿಗೆ ಶಾಲೆಗೆ ಪ್ರವೇಶ ಪಡೆದು ವಿದ್ಯಾಭ್ಯಾಸ ಮುಂದುವರೆಸಿದರು.

ಸಿದ್ದರಾಮಯ್ಯ ರವರ ವಿದ್ಯಾಭ್ಯಾಸ

ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ತಮ್ಮ ಹುಟ್ಟೂರಿನಲ್ಲೂ, ಪಿ.ಯು.ಸಿ.ಯನ್ನು ಮೈಸೂರಿನಲ್ಲಿ, ಬಿ.ಎಸ್ಸಿಯನ್ನು ಯುವರಾಜ ಕಾಲೇಜಿನಲ್ಲಿ ಓದಿದರು. ನಂತರ ಮೈಸೂರು ವಿವಿಯಿಂದ ಕಾನೂನು ಪದವಿ ಪಡೆದು, ಚಿಕ್ಕಬೋರಯ್ಯ ಎಂಬ ವಕೀಲರ ಬಳಿ ಜೂನಿ ಯರ್ ಆಗಿ ನಂತರ ೧೯೭೮ರವರೆಗೆ ಸ್ವಂತ-ವಕೀಲಿ ವೃತ್ತಿ ನಡೆಸಿದರು.

೧೯೮೩ರ ರಾಜ್ಯ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಗಡಿಭಾಗಗಳಾದ ಕಾಸರಗೋಡು, ಬೆಳಗಾವಿ, ಕೋಲಾರ ಮುಂತಾದೆಡೆ ಪ್ರವಾಸ ಕೈಗೊಂಡು ವರದಿ ಸಲ್ಲಿಸಿದರು.

೧೯೮೫ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು. ಪಶುಸಂಗೋಪನೆ ಸಚಿವರನ್ನಾಗಿ ನೇಮಕ. ಸಂಪುಟ ಪುನರ್ರಚನೆಯ ನಂತರ ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.

೧೯೮೯ರ ಕಾಂಗ್ರೆಸ್ ಅಲೆಯಲ್ಲಿ ಚುನಾವಣೆ ಸೋತ ಸಿದ್ಧರಾಮಯ್ಯ, ಜನತಾ ಪಕ್ಷ ಹೋಳಾದಾಗ ಜನತಾದಳ ಸೇರಿದರು. ೧೯೯೨ರಲ್ಲಿ ದೇವೇಗೌಡರು ಸಮಾಜವಾದಿ ಜನತಾ ಪಕ್ಷದಿಂದ ಜನತಾದಳ ಸೇರಿದಾಗ, ಜನತಾದಳದ ಕಾರ್ಯದರ್ಶಿಯಾದರು.

೧೯೯೪ರ ಚುನಾವನಣೆಯಲ್ಲಿ ಗೆದ್ದು ಹಣಕಾಸು ಸಚಿವರಾದರು.

೧೯೯೯ರ ಚುನಾವಣೆಯ ಹೊತ್ತಿಗೆ ಜನತಾ ದಳ ೨ ಭಾಗವಾದಾಗ, ದೇವೇಗೌಡರೊಂದಿಗೆ ಸೇರಿ ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾದರು.

೧೯೯೯ರ ಚುನಾವಣೆಯಲ್ಲಿ ಸೋಲು .

೨೦೦೪ರ ಹೊತ್ತಿಗೆ ಜಾತ್ಯತೀತ ಜನತಾದಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾದರು.

೨೦೦೪ರಲ್ಲಿ ಅತಂತ್ರ ವಿಧಾನಸಭೆ ರಚನೆಯಾದಾಗ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ ೨ ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದರು.

೨೦೦೬ರ ಡಿಸೆಂಬರ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದರು.

೨೦೦೮ರಲ್ಲಿ ಗೆದ್ದ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದರು.

೨೦೧೩ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು.

ಮೇ ೧೦ ೨೦೧೩ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ, ಮೇ ೧೩ ೨೦೧೪ರಂದು ಕರ್ನಾಟಕದ ೨೨ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. (೧೩ ಮೇ ೨೦೧೩ – )

ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಮಾಡಿದರು ಮತ್ತು ದಲಿತವರ್ಗಗಳಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸನ್ನು ನೀಡಿದ್ದರು.

೧೨-೦೫-೨೦೧೮ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಅವುಗಳಲ್ಲಿ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದರು.

2ನೇ ಬಾರಿ ಸಿದ್ದರಾಮಯ್ಯ ಸಿಎಂ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೋ

2023 ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹುಟ್ಟೂರು ಕ್ಷೇತ್ರವಾದ ವರುಣಾ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಾರೀ ಅಂತರದಲ್ಲಿ ಗೆಲುವು ಸಾಧಿಸಿದರು. ಇದೀಗಾ ಮತ್ತೊಮ್ಮೆ ಎರಡನೇ ಬಾರಿಗೆ ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.ನಾಳೆ ಅಂದರೆ ಮೇ 18 ರಂದು ಕಂಠೀರಾವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬ ಆಹ್ವಾನ ಪತ್ರಿಕೆಯೊಂದು ಹರಿದಾಡುತ್ತಿದೆ.ಈ ಆಹ್ವಾನ ಪತ್ರಿಕೆ ಸತ್ಯವೋ ಇಲ್ಲವೋ ಅಂತ ಕಾದಷ್ಟೇ ನೋಡಬೇಕಿದೆ.

Leave a Reply

Your email address will not be published. Required fields are marked *