ನಂದಿನಿ ಮೈಸೂರು
ಮೈಸೂರು : ಕಾಂಗ್ರೆಸ್ ಸರ್ಕಾರದ ಮೂಡ ಹಗರಣ, ವಾಲ್ಮೀಕಿ ನಿಗಮದ 187 ಕೋಟಿ ಹಣದ ದುರುಪಯೋಗ ಇನ್ನು ಅನೇಕ ಭ್ರಷ್ಟಾಚಾರಗಳನ್ನು ಸಾರ್ವಜನಿಕರಿಗೆ ತಿಳಿಸಲು ಮತ್ತು ತನಿಖೆ ಮಾಡಿ ಒಪ್ಪಿಸಬೇಕೆಂದುಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವತಿಯಿಂದ ದಿನಾಂಕ 3/ 8/ 24ರಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಅ. 10 ರಂದು ಮೈಸೂರಿನಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಅಪಾರ ಪ್ರಮಾಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಹದಿನಾರು ಗುರುಪಾದಸ್ವಾಮಿ ಮನವಿ ಮಾಡಿದ್ದಾರೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯದ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಪ್ರತಿ ಗ್ರಾಮದಲ್ಲೂ ನಾಯಕರನ್ನು ಸನ್ಮಾನ ಮಾಡಿ, ಜನರು ಆಹ್ವಾನ ಮಾಡಿಕೊಳ್ಳುತ್ತಿದ್ದಾರೆ. ಇದು ಅವರ ವರ್ಚಸ್ಸಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಮ್ಮ ಇಳಿ ವಯಸ್ಸಿನಲ್ಲೂ ದೇಶ ಹಾಗೂ ನಾಡಿನ ಜನರಿಗೆ ನ್ಯಾಯ ಕೊಡಿಸಬೇಕು. ಪ್ರಜಾಪ್ರಭುವ ಉಳಿಸಬೇಕು ಎನ್ನುವ ನಿಟ್ಟಿನಲ್ಲಿ ಪಣತೊಟ್ಟು ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ರಾಜ್ಯದ ಜನರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿಗಳೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಜನರ ಹಿತಕ್ಕೆ ಸದಾ ಹೋರಾಟ ಮಾಡುತ್ತಿದ್ದಾರೆ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪಾದಾಯಾತ್ರೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರಿಗೆ ಶಕ್ತಿ ತುಂಬಿದ್ದಾರೆ. ಜನರು ಅವರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು,
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ರಾಜ್ಯದಲ್ಲಿ ಬಿಜಪಿ ಪಕ್ಷ ಹಾಗೂ ಕಾಯಕರ್ತರಿಗೆ ವಿಶೇಷ ಶಕ್ತಿ . ಹೊಸ ಚೈತನ್ಯ ಬಂದಿದೆ. ವಿಜಯೇಂದ್ರ ಅವರು ಕೇವಲ ಒಂದು ವರ್ಗದ ನಾಯಕರಲ್ಲ. ಅವರು ಎಲ್ಲ ವರ್ಗದ ನಾಯಕರಾಗಿದ್ದಾರೆ. ವಿಧಾನ ಹಾಗೂ ಲೋಕಸಭಾ ಚುನಾವಣೆ ಮತ್ತು ಉಪ ಚುನಾವಣೆಯಲ್ಲಿ ಹೆಚ್ಚೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಆ ಮೂಲಕ ಅವರ ಶಕ್ತಿ ಏನು ಎಂದು ತಿಳಿಸಿದ್ದಾರೆ. ಇವರ ಹೋರಾಟ ಮತ್ತು ಶ್ರಮವನ್ನು ಗುರುತಿಸಿ ಕೇಂದ್ರದ ನಾಯಕರು ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದೆ. ಮುಂದಿನ ದಿನಗಳಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಅನುಮಾನಗಳು ಇಲ್ಲ ಎಂದು ತಿಳಿಸಿದ್ದಾರೆ.