ನಂದಿನಿ ಮೈಸೂರು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ!
![](https://bharathnewstv.in/wp-content/uploads/2025/01/OPENING-TODAY.jpg)
ದೆಹಲಿ, ಕರ್ನಾಟಕ ಸಮಾಚಾರ.ಡಿ.25: ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರು ಹಾಗೂ ಎರಡು ಅವಧಿಗೆ ದೇಶದ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು. ಗುರುವಾರ ಸಂಜೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮನಮೋಹನ್ ಸಿಂಗ್ 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು.
ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.