ನಂಜನಗೂಡು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದ ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದ
ಶಾಸಕ ದರ್ಶನ್ ಧ್ರುವನಾರಾಯಣ್

ಮಲ್ಕುಂಡಿ:- ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಕಂಕಣ ಬದ್ದನಾಗಿ ಕೆಲಸ ಮಾಡುತ್ತೆನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ನಂಜನಗೂಡು ತಾಲ್ಲೂಕಿನ ಸಂಗಮ ಕ್ಷೇತ್ರದಲ್ಲಿ 1.50 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಹಾಗೂ ಕಪ್ಪಸೋಗೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಸರ್ಕಾರದಿಂದಿ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಜನರ ನೀರಿಕ್ಷೆಗೆ ತಕ್ಕಂತೆ ಕೆಲಸ ಮಾಡುವುದೆ ನನ್ನ ಗುರಿಯಾಗಿದೆ ಈ ಗಾಗಲ್ಲೇ ಕ್ಷೇತ್ರಕ್ಕೆ25 ಕೋಟಿ ಅನುದಾನ ತಂದು ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಸಮರ್ಪಕವಾಗಿ ಅನುದಾನ ನೀಡಿ ಅಭಿವೃದ್ಧಿ ಪಡಿಸಲಾಗಿದೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ನಮ್ಮ ಸರ್ಕಾರ ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೂ ಹೆಚ್ಚಿನ ಅದ್ಯತೆ ನೀಡುತ್ತಿದ್ದು ಸರ್ಕಾರ ರಾಜ್ಯದ ಜನರ ಪರ ಕೆಲಸ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿಗೆ ಅದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅದ್ಯಕ್ಷರಾದ ಕೆ ಜಿ ಮಹೇಶ್, ಶ್ರೀಕಂಠನಾಯಕ, ಮುಖಂಡರುಗಳಾದ ಸಿ ಎಂ ನಾಗಣ್ಣ,ಹಾಡ್ಯ ಜಯರಾಂ,ಮಡಿಕೆಹುಂಡಿ ಶಿವಣ್ಣ,ಕೆ ಮಾದಪ್ಪ,ಚನ್ನಪ್ಪ,ಶಿವರಾಜಪ್ಪ,ಮಲ್ಲಿಕಾರ್ಜುನಪ್ಪ,ಸಂಗರಾಜು,ಕೆ ಮಾರುತಿ,ಮರಿಸ್ವಾಮಪ್ಪ,ಪ್ರಭುಸ್ವಾಮಿ,ಸೇರಿದಂತೆ ಪ್ರಮುಖರು ಹಾಜರಿದ್ದರು

Leave a Reply

Your email address will not be published. Required fields are marked *