ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ನಂಜನಗೂಡಿನಲ್ಲಿ ಮಹಿಳೆ ಆತ್ಮಹತ್ಯೆ
ಮಲ್ಕುಂಡಿ: ಸಮೀಪದ ಅಂಬಳೆ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಗ್ರಾಮದ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಆಗಿದ್ದಾರೆ.
ಘಟನೆ : ಐ ಐ ಎಫ್ ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ 5 ಲಕ್ಷಕ್ಕೂ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇ ಎಂ ಐ ಕಟ್ಟಬೇಕಾಗಿತ್ತು. ಸಾಲ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಒದ್ದಾಡುತ್ತಿದ್ದನ್ನು ಅಕ್ಕ ಪಕ್ಕದವರು ಕಂಡು ವಿಷಯ ಕುಟುಂಬಸ್ಥರಿಗೆ ವಿಷಯ ಮುಟ್ಟಿಸುವಷ್ಟರಲ್ಲಿ ಮೃತ ಪಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹವನ್ನು ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲಾ.