ಡಾ.ಅಂಬೇಡ್ಕರ್ ಸಮುದಾಯ ಭವನ,ಸಿಸಿ ರಸ್ತೆ ಕಾಮಗಾರಿಗೆ ಶಾಸಕ ದರ್ಶನ್ ದ್ರುವನಾರಾಯಣ ಚಾಲನೆ

ಮಲ್ಕುಂಡಿ:- ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅದ್ಯತೆ ನೀಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ಸಮೀಪದ ಬೀರದೇವನಪುರ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಸಿಸಿ ರಸ್ತೆ,ಈರೇಗೌಡನಹುಂಡಿ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಡಾ.ಅಂಬೇಡ್ಕರ್ ಸಮುದಾಯಭವನ,ಅರಿಯೂರು ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಡಾ.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಚುನಾವಣೆ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರು ಅದನ್ನು ಅರಿತು ಗ್ರಾಮೀಣ ಭಾಗದಲ್ಲಿ ಪ್ರತಿ ಗ್ರಾಮಗಳಿಗೂ ಸಿಸಿ ರಸ್ತೆ ಹಾಗೂ ಎಲ್ಲಾ ಜನಾಂಗಕ್ಕೂ ಸಮುದಾಯ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅನುದಾನದಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಪ್ರತಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲಾಗುವುದು ನಮ್ಮ ಸರ್ಕಾರ 5 ವರ್ಷ ಪೂರೈಸಲಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಯತ್ತ ಕೊಂಡ್ಯೊಯಲಾಗುವುದು ಗ್ರಾಮೀಣ ಭಾಗದಲ್ಲಿ ಯಾವುದೇ ಕಾಮಗಾರಿ ಇದ್ದರೂ ನನ್ನ ಗಮನಕ್ಕೆ ತನ್ನಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ಗ್ಯಾರಂಟಿ ಸಮಿತಿ ತಾಲ್ಲೂಕು ಅದ್ಯಕ್ಷ ಕೆ ಮಾರುತಿ,ಅಕ್ರಮ ಸಕ್ರಮ ಸಮಿತಿ ಸದಸ್ಯ ಹಾಡ್ಯ ಜಯರಾಂ,ಗ್ರಾ ಪಂ ಸದಸ್ಯ ಸತೀಶ್, ಹಾಡ್ಯ ಗ್ರಾ ಪಂ ಅದ್ಯಕ್ಷ ಹರೀಶ್ ಕುಮಾರ್, ಕೃಷ್ಣ, ಗೋವಿಂದರಾಜು, ಮುಖಂಡರುಗಳಾದ ಸುರೇಶ್, ಬಳ್ಳೂರಹುಂಡಿ ಶಿವನಾಗಪ್ಪ, ಜಯಕುಮಾರ್,ಗುತ್ತಿಗೆದಾರ ಮಹದೇವ್, ಸುರೇಶ್, ಗ್ರಾ ಪಂ ಉಪಾಧ್ಯಕ್ಷ ದಿನೇಶ್,ಸಿದ್ದರಾಜು,ಪಾಟೀಲ್ ಮಹದೇವಪ್ಪ,ಕಡಜಟ್ಟಿ ಮಹೇಶ್, ಇಂಜಿನಿಯರ್ ಯಶವಂತ್,ಈರಯ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು.

Leave a Reply

Your email address will not be published. Required fields are marked *