ರಾಜ್ಯದ 9 ವಿಶ್ವವಿದ್ಯಾಲಯಗಳನ್ನೂ ಮುಚ್ಚುವ ಸರ್ಕಾರದ ತೀರ್ಮಾನಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಖಂಡನೆ.
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಸಚಿವ ಸಂಪುಟ ತಿರ್ಮಾನದ ತೆಗೆದು ಕೊಂಡಿರುವುದು ದುರ್ದೈವದ ಸಂಗಕಿಯಾಗಿದೆ ಹಾಗೂ ಮೈಸೂರು ವಿಭಾಗದ ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೋರಟಿರುವ ರಾಜ್ಯ ಸರ್ಕಾರದ ನಡೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ.ಈ.ಸಿ.ನಿಂಗರಾಜ್ ಗೌಡ ರವರು ಖಂಡಿಸಿದ್ದಾರೆ.
ಈ ರೀತಿ 9 ವಿಶ್ವವಿದ್ಯಾನಿಲಯಗಳನ್ನೂ ಮುಚ್ಚಲೂ ಹೊರಟಿರುವ ಕ್ರಮವೂ ಆಯಾ ಜಿಲ್ಲೆಗಳ ಜನರಿಗೆ ಮಾಡಿದ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಪ್ರತಿ ವರ್ಷ 50,000 ಕೋಟಿ ರೂಗಳನ್ನು ನೀಡುತ್ತಿದೆ. ಅದರಲ್ಲಿ 10% ರಷ್ಟು ಅಂದರೆ 5000 ಕೋಟಿ ರೂಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿ-ಗತಿ ಸುಧಾರಿಸುತ್ತದೆ. ಕಳೆದ 15-20 ವರ್ಷಗಳಿಂದ ರಾಜ್ಯ ಸರ್ಕಾರಗಳು ವಿಶ್ವವಿದ್ಯಾಲಯಗಳಿಗೆ ಯಾವುದೇ ರೀತಿಯ ಅನುದಾನಗಳನ್ನು ನೀಡಿರುವುದನ್ನೂ ಕಡಿತ ಮಾಡಿಕೊಂಡು ಬಂದು ಈಗಿನ ಸರ್ಕಾರ ಸಂಪೂರ್ಣ ನಿಲ್ಲಿಸಿದೆ. ಎಲ್ಲಾ ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ, ಮರು ಎಣಿಕೆ ಅಥವಾ ಮರು ಮೌಲ್ಯಮಾಪನ ಶುಲ್ಕಗಳಲ್ಲಿ ಮತ್ತು ಆಂತರಿಕ ಹಣಕಾಸು ಉತ್ಪಾದನೆಯ ಮೂಲಕ ಇಂದು ವಿಶ್ವವಿದ್ಯಾಲಯಗಳು ನಡೆಯುತ್ತಿರುವುದು ಅವಮಾನದ ಸಂಗತಿಯಾಗಿದೆ.
ಕರ್ನಾಟಕದಂತಹ ರಾಜ್ಯದಲ್ಲಿ ಮೈಸೂರು ಅರಸರ ಆಳ್ವಿಕೆಯ ಕಾಲದಿಂದಲೂ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಗೌರವ ಮತ್ತು ಹೆಗ್ಗಳಿಕೆ ಇದೆ. ಆದ್ದರಿಂದ ಕೇವಲ ಹಣಕಾಸಿನ ದೃಷ್ಠಿಯಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೋರಟಿರುವುದು, ಒಂದು ಘನ ಸರ್ಕಾರಕ್ಕೆ ಶೋಭೆ ತರುವಂತಹ ಕಾರ್ಯವಲ್ಲ ಎಂದು ಭಾವಿಸುತ್ತೇನೆ. ಹಿಂದಿನ ರಾಜ್ಯ ಸರಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಪ್ರಾರಂಭಿಸಿದರೆ ಅಲ್ಲಿನ ಗ್ರಾಮೀಣ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹೊಸದಾಗಿ 10 ವಿಶ್ವವಿದ್ಯಾನಿಲಯಗಳನ್ನು ಪ್ರಾರಂಭಿಸಿತ್ತು. ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ನೃಪತುಂಗ ವಿಶ್ವವಿದ್ಯಾಲಯ ಹಾಗೂ ಬೀದರ್ ನಲ್ಲಿ ಹೊಸ ವಿಶ್ವವಿದ್ಯಾನಿಲಯ ಪ್ರಾರಂಭಿಸುವುದಕ್ಕೆ ಹಿಂದಿನ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಇಂದಿನ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯಗಳಿಗೆ ಅನುದಾನ ನೀಡಿ, ಅಭಿವೃದಿ ಪಡಿಸದೆ ಅವುಗಳನ್ನು ಮುಚ್ಚುವುದಕ್ಕೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ನಿರ್ಧರಿಸುವುದು ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿರುವುದನ್ನು ಡಾ.ಈ.ಸಿ.ನಿಂಗರಾಜ್ ಗೌಡ ರವರು ತೀವ್ರವಾಗಿ ಖಂಡಿಸಿದ್ದಾರೆ.
ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಿಷ್ಟಗೊಳಿಸುವ ಕಾಳಜಿ ಮತ್ತು ಇಚ್ಚಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚೆಗೆ ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವುದರಿಂದ ರಾಜ್ಯದ ದಲಿತ, ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸಾವಿರಾರು ಕೋಟಿರೂ.ಗಳನ್ನು ಬಜೆಟ್ನಲ್ಲಿ ಕೊಟ್ಟಿದೆ. ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ಹಣ ಒದಗಿಸುವುದಕ್ಕೆ ಆಗದೆ, 9 ವಿಶ್ವವಿದ್ಯಾನಿಯಗಳನ್ನು ಮುಚ್ಚಲು ಮುಂದಾಗಿರುವುದು ಖಂಡನಾರ್ಹವಾಗಿದೆ. ಯಾವ ಶಿಕ್ಷಣ ತಜ್ಞರ ಶಿಫಾರಸ್ಸಿನ ಮೇಲೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲೂ ಸಚಿವ ಸಂಪೂಟದಲ್ಲಿ ತೀರ್ಮಾನಿಸಿದ್ದೀರಿ ಎಂಬುವುದನ್ನು ರಾಜ್ಯದ ಜನತೆಗೆ ತಿಳಿಸಿ ಕ್ಷಮೆಯಾಚಿಸಬೇಕು. ರಾಜ್ಯದ ಉನ್ನತ ಶಿಕ್ಷಣ ಪರಿಷತ್ ಶಿಫಾರಸ್ಸು ಮಾಡಿರುವ ಹಣವನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳ ಭವ್ಯಿಷ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನೂ (NEP) ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲೂ ಈ ಕೂಡಲೇ ಜಾರಿಗಳಿಸಬೇಕೆಂದು ಡಾ.ಈ.ಸಿ.ನಿಂಗರಾಜ್ ಗೌಡ ರವರು ರಾಜ್ಯ ಸರ್ಕಾರವನ್ನೂ ಆಗ್ರಹಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯವೂ ಸೇರಿದಂತೆ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿಯಿರುವ ಭೋದಕ ಹುದ್ದೆಗಳಾದ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಪ್ರಾಧ್ಯಾಪಕ (ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ) , ತಾಂತ್ರಿಕ ಹುದ್ದೆಗಳು ಹಾಗೂ ಎಲ್ಲಾ ಭೋದಕೇತರ ಹುದ್ದೆಗಳನ್ನೂ ಕೂಡಲೇ ಭರ್ತಿ ಮಾಡಬೇಕೆಂದು ಡಾ.ಈ.ಸಿ.ನಿಂಗರಾಜ್ ಗೌಡರವರು ರಾಜ್ಯ ಸರ್ಕಾರವನ್ನೂ ಆಗ್ರಹಿಸಿದ್ದಾರೆ.
ಮಾರ್ಚ್ ತಿಂಗಳಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಹಣಕಾಸು ಖಾತೆಯನ್ನೂ ಹೊಂದಿರುವ ಶ್ರೀ ಸಿದ್ದರಾಮಯ್ಯ ರವರು ಮಂಡಿಸುತ್ತೀರುವ ಬಜೆಟ್ ನಲ್ಲಿ ರಾಜ್ಯದ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕಾಗಿ ಕನಿಷ್ಠ 10,000 ಕೋಟಿ ರೂಪಾಯಿಗಳನ್ನೂ ಮಿಸಲೀಡಬೇಕೆಂದು ಡಾ.ಈ.ಸಿ.ನಿಂಗರಾಜ್ ಗೌಡರವರು ಆಗ್ರಹಪೂರ್ವಕವಾಗಿ ವಿನಂತಿಸಿದ್ದಾರೆ.
ವಂದನೆಗಳೊಂದಿಗೆ,
ಡಾ.ಈ.ಸಿ.ನಿಂಗರಾಜ್ ಗೌಡ,
ಸಿಂಡಿಕೇಟ್ ಮಾಜಿ ಸದಸ್ಯರು,
ಮೈಸೂರು ವಿಶ್ವವಿದ್ಯಾನಿಲಯ.
ಮೊಬೈಲ್ ನಂಬರ್ : 9980184789