ದೆಹಲಿ ಸ್ಪೋಟ ಪ್ರಕರಣ ಮೈಸೂರಿನಲ್ಲಿ ಹೈ ಅಲರ್ಟ್, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರ ವಿವಿಧ ಲಾಡ್ಜ್‌ಗಳಲ್ಲಿ ತಪಾಸಣೆ

ನಂದಿನಿ ಮನುಪ್ರಸಾದ್ ನಾಯಕ್

*ಮೈಸೂರಿನಲ್ಲಿ ಹೈ ಅಲರ್ಟ್*

ದೆಹಲಿ ಸ್ಪೋಟ ಪ್ರಕರಣ ಸಂಬಂಧಿಸಿದಂತೆ ಡಿಜಿ & ಐಜಿ ಅವರ ಸೂಚನೆ ಮೇರೆಗೆ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ರಾತ್ರಿ
ಮೈಸೂರು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರ ವಿವಿಧ ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಲಾಯಿತು.

ಡಿಸಿಪಿಗಳು ಎಸಿಪಿಗಳು, ಇನ್ಸಪೆಕ್ಟರ್ ಸಬ್ ಇನ್ಸಪೆಕ್ಟರ್‌ಗಳು ಪೊಲೀಸ್ ಸಿಬ್ಬಂದಿ ತಪಾಸಣೆಯಲ್ಲಿ ಭಾಗಿಯಾಗಿ ಸಂಪೂರ್ಣ ಪರಿಶೀಲನೆ ನಡೆಸಿದರು. ರೈಲು ನಿಲ್ದಾಣದ ಫ್ಲ್ಯಾಟ್‌ಫಾರಂ ಸೇರಿ ಹಲವು ಕಡೆ ತಪಾಸಣೆ ಮಾಡಲಾಯಿತು. ಪ್ರಯಾಣಿಕರ ಲಗೇಜು‌ ಒಳಗೊಂಡತೆ ಸಂಪೂರ್ಣ ತಪಾಸಣೆ ಮಾಡಲಾಗಿದೆ. ಇನ್ನು ನಾಳೆ ತಪಾಸಣೆ ಮತ್ತಷ್ಟು ಚುರುಕುಗೊಳಿಸಲಾಗುವುದು. ಮೈಸೂರು ಅರಮನೆ ಸೇರಿದಂತೆ ಪ್ರವಾಸಿತಾಣಗಳು, ಮಾಲ್, ಪಾರ್ಕಿಂಗ್ ಸ್ಥಳಗಳು, ಹೋಟೆಲ್, ಲಾಡ್ಜ್‌ಗಳು, ದೇವಸ್ಥಾನಗಳು ಸೇರಿದಂತೆ ಎಲ್ಲಾ ಕಡೆ ಸಂಪೂರ್ಣ ಪರಿಶೀಲನೆ ನಡೆಸಲಾಗುವುದು.

*ಸಾರ್ವಜನಿಕರಲ್ಲಿ ವಿಶೇಷ ಮನವಿ*

ಮೈಸೂರು ನಗರದ ಶಾಂತಿ, ಸುರಕ್ಷತೆ ನಮ್ಮ ಆದ್ಯತೆ ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡುವಂತೆ ಈ ಮೂಲಕ ಮನವಿ ಮಾಡುತ್ತೇನೆ. ನಿಮಗೆ ಯಾವುದಾದರೂ ಅನುಮಾನಾಸ್ಪದ ವಸ್ತುಗಳು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ನೀಡಿ. ಈ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಿ ಎಲ್ಲರಿಗೂ ಧನ್ಯವಾದಗಳು ಎಂದು ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕಾರ್ ತಿಳಿಸಿದ್ದಾರೆ

Leave a Reply

Your email address will not be published. Required fields are marked *