ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ನಡೆದ ಶಿವರಾತ್ರಿ ಸಂಭ್ರಮ ಲಕ್ಷಾಂತರ ಭಕ್ತರೂ ಭಾಗಿ

ನಂದಿನಿ ಮನುಪ್ರಸಾದ್ ನಾಯಕ್

 

ಹನೂರು : ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಹಾರಥೋತ್ಸವದೊಂದಿಗೆ ಭಕ್ತರು ಹಾಗೂ ಸರ್ಕಾರ,ಜಿಲ್ಲಾಡಳಿತದ ಸಹಕಾರದೊಂದಿಗೆ ಅದ್ದೂರಿಯಾಗಿ ಯಶಸ್ವಿಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು.


ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ರಥೋತ್ಸವ ಯಶಸ್ವಿಯಾಗಿ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಪಾದಯಾತ್ರಿಕ ಭಕ್ತಾದಿಗಳು ಸೇರಿದಂತೆ ಇತರೆ ಭಕ್ತಾದಿಗಳು ಸುಮಾರು 8 ರಿಂದ 9 ಲಕ್ಷಕ್ಕೆ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದ್ದಾರೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಯಶಸ್ವಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ರವರು ಶಾಸಕ ಎಂಆರ್ ಮಂಜುನಾಥ್ ರವರು ಜಿಲ್ಲಾಡಳಿತ ಹಾಗೂ ಸಾಲೂರು ಬ್ರಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕ ವೃಂದದವರ ಮಾರ್ಗದರ್ಶನದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಿದೆ ಎಂದರು.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಾಧಿಕಾರದ ಪ್ರತಿಯೊಬ್ಬ ನೌಕರರು ಹಗಲಿರುಳು ಶ್ರಮಿಸಿ ಯಶಸ್ವಿಗೆ ಕಾರಣಿಭೂತರಾಗಿದ್ದಾರೆ ಅವರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

ಈ ಬಾರಿ ಸುಮಾರು ಎಂಟು ಲಕ್ಷಕ್ಕೂ ಹೆಚ್ಚು ಮಾದಪ್ಪ ಭಕ್ತಾದಿಗಳು ವಿಶೇಷ ದಾಸೋಹ ಹಾಗೂ ದಾಸೋಹ ಭವನದಲ್ಲಿ ಪ್ರಸಾದ ಸ್ವೀಕರಿಸಿದ್ದಾರೆ. ಮಹದೇಶ್ವರ ಸ್ವಾಮಿ ಎಲ್ಲರಿಗೂ ಒಳಿತು ಮಾಡಲಿ ಎಂದು ಶುಭ ಕೋರಿದರು.

ಇವೇಳೆ ಲೆಕ್ಕಾಧಿಕ್ಷಕರಾದ ಗುರುಮಲ್ಲಯ್ಯ, ದ್ವಿತೀಯ ದರ್ಜೆ ಸಹಾಯಕರುಗಳಾದ ಸರಗೂರು ಮಹದೇವಸ್ವಾಮಿ, ನಾಗರಾಜು, ಜನಾರ್ಧನ್, ಪಾರುಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ ರಾಜಶೇಖರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *