ವಿಜಯನಗರದಲ್ಲಿರುವ ಶ್ರೀ ಯಾಗಾನರಸಿಂಹ ಸ್ವಾಮಿದೇವಾಲಯದ ರಾಜಗೋಪುರ ನಿರ್ಮಾಣಕ್ಕೆ ಗುದ್ದಲಿ ಪೂಜೆ

ನಂದಿನಿ ಮನುಪ್ರಸಾದ್ ನಾಯಕ್

ರಾಜಗೋಪುರ ನಿರ್ಮಾಣಕ್ಕೆ ಚಾಲನೆ



ಮೈಸೂರು: ಇಲ್ಲಿನ ವಿಜಯನಗರದಲ್ಲಿರುವ ಶ್ರೀ ಯಾಗಾನರಸಿಂಹ ಸ್ವಾಮಿದೇವಾಲಯದ ರಾಜಗೋಪುರ ನಿರ್ಮಾಣಕ್ಕೆ ಗುರುವಾರ ಬೆಳಗ್ಗೆ ಚಾಲನೆ ದೊರೆಯಿತು.
ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು, ರಾಜಗೋಪುರ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಗುರುವಾರ ಬೆಳಗ್ಗಿನಿಂದಲೇ ಶ್ರೀ ಸ್ವಾಮಿಗೆ ವಿಶೇಷ ಪೂಜಾ-ಕೈಂಕರ್ಯಗಳು ಜರುಗಿತಲ್ಲದೇ, ೧೦.೩೦ರಿಂದ ೧೧.೦೦ ಗಂಟೆಯ ಒಳಗೆ ಸಲ್ಲುವ ಶುಭ ಲಗ್ನದಲ್ಲಿ ವಿಧಿ-ವಿಧಾನಗಳಂತೆ ರಾಜಗೋಪುರ ನಿರ್ಮಾಣ ಕಾರ್ಯಕ್ಕೆ ಶ್ರೀಗಳು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾಷ್ಯಂ ಸ್ವಾಮೀಜಿ ಅವರು, ಯೋಗಾನರಸಿಂಹ ದೇವಾಲಯವನ್ನು ಮತ್ತಷ್ಟು ಅಭಿವೃದ್ದಿಗೊಳಿಸಿ, ಭಕ್ತರಿಗೆ ಅಗತ್ಯ ಸಕಲ-ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿದ್ದು, ಅಂತೆಯೇ ಇಂದು ದೇಗುಲದ ರಾಜಗೋಪುರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾಗಬೇಕೆಂದು ಆಶೀರ್ವದಿಸಿದರು.
ಇದೇ ವೇಳೆ ದೇವಸ್ಥಾನಕ್ಕೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೂ ಅನ್ನಸಂತರ್ಪಣೆ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಈ ಸಂದರ್ಭದಲ್ಲಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಪ್ರಧಾನ ಅರ್ಚಕರಾದ ಶೇಷಾದ್ರಿ ಅವರುಗಳು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *