ನಡೆದಾಡುವ ದೇವರು ಶಿವಕುಮಾರ ಮಹಾಸ್ವಾಮೀಜಿಯವರ 119 ಜಯಂತಿ ಕಾರ್ಯಕ್ರಮ ಹಾಗೂ ಶ್ರೀ ಸಿದ್ದಗಂಗಾ ಸಿರಿ ಪ್ರಶಸ್ತಿ ಪ್ರಧಾನ

ನಂದಿನಿ ಮನುಪ್ರಸಾದ್ ನಾಯಕ್

ಶ್ರೀ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆದಾಡುವ ದೇವರು ಎಂದು ಖ್ಯಾತಿ ಪಡೆದಿರುವ ಶಿವಕುಮಾರ ಮಹಾಸ್ವಾಮಿಜಿಯವರ 119 ಜಯಂತಿ ಕಾರ್ಯಕ್ರಮ ಹಾಗೂ ಶ್ರೀ ಸಿದ್ದಗಂಗಾ ಸಿರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಮೈಸೂರಿನ ನಮನ ಕಲಾ ಮಂಟಪದಲ್ಲಿ ಕುದೇರ ಮಠ ಕಿರಿಯ ಶ್ರೀಗಳಾದ ಶ್ರೀ ಇಮ್ಮಡಿ ಗುರುಲಿಂಗಸ್ವಾಮಿ ಅವರ ದಿವ್ಯ ಆಶಿರ್ವಾದೊಂದಿಗೆ ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್.ಎಂ. ನವೀನ್ ಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು.

ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಿಂದ ಡಾ.ಕೆ ಲೀಲಾ ಪ್ರಕಾಶ್, ವೈದ್ಯಕೀಯ ಕ್ಷೇತ್ರದಿಂದ ಗಿರೀಶ್, ಶಿಕ್ಷಣ ಕ್ಷೇತ್ರದಿಂದ ಮಂಜುಳಾ, ಸಾಹಿತ್ಯ ಮತ್ತು ಧಾರ್ಮಿಕ ಕ್ಷೇತ್ರದಿಂದ ಸುಮರಾವ್ ಸಾರ್ವಜನಿಕ ಸೇವಾ ಕ್ಷೇತ್ರದಿಂದ ಗೋಪಾಲ್, ಸಮಾಜ ಸೇವಾ ಕ್ಷೇತ್ರದಿಂದ ವಕೀಲೆ ತನುಜಾ ಮಹೇಶ್ ಸಮಾಜ ಸೇವಾ ಕ್ಷೇತ್ರದಿಂದ ಲಯನ್ ಗೋಲ್ಡನ್ ಟಿ. ಸುರೇಶ್ , ಮಾಧ್ಯಮ ಕ್ಷೇತ್ರದಿಂದ ಲೋಕೇಶ್ ಹಾಲಹಳ್ಳಿ ಇವರಿಗೆ ಶ್ರೀ ಸಿದ್ದಗಂಗಾ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಹಿರಿಯ ವೀರಗಾಸೆ ಕಲಾವಿದರಾದ ಅಂಬಳೆ ಶಿವಣ್ಣ,
ಕವಿಗಳಾದ ಡಾ. ಜಯಪ್ಪ ಹೊನ್ನಾಳಿ, ಹಿರಿಯ ಸಮಾಜ ಸೇವಕರಾದ ಡಾ.ಕೆ ರಘುರಾಂ ವಾಜಪೇಯಿ, ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷರಾದ ಡಾ. ಎಂ ಜಿ ಆರ್ ಎಸ್ ಅರಸ್, ಕದಳಿ ಮಹಿಳಾ ವೇದಿಕೆ ಅಧ್ಯಕ್ಷರಾದ ಶೋಭಾರಾಣಿ ಜೈ ಪ್ರಕಾಶ್, ಶ್ರೀ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥಾಪಕ ಅಧ್ಯಕ್ಷರಾದ ಬಸವರಾಜೇಂದ್ರ ಸ್ವಾಮಿ ಸೇರಿದಂತೆ ಇತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *