ನಂದಿನಿ ಮನುಪ್ರಸಾದ್ ನಾಯಕ್

ತಿ. ನರಸೀಪುರ………

ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ.
ಸಮಾಜಸೇವಕ ಮಹೇಂದ್ರ ಸಿಂಗ್ ಕಾಳಪ್ಪ ಕರೋಹಟ್ಟಿ ಗ್ರಾಮಸ್ಥರು, ಅರವಿಂದ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರ.
ಕಾನ್ ಸಿಂಗ್ ರಾಜ್ ಪುರೋಹಿತ್, ಗೌರಿದೇವಿ ಅವರ ಸ್ಮರಣಾರ್ಥವಾಗಿ ಕಣ್ಣಿನ ತಪಾಸಣಾ ಶಿಬಿರ ಆಯೋಜನೆ
ಕರೋಹಟ್ಟಿ ಗ್ರಾಮದ ಶ್ರೀ ಗುರುಮಲ್ಲೇಶ್ವರ ಮಠದ ಆವರಣದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರ

ಕಾರ್ಯಕ್ರಮ ಕುರಿತು ಮಹೇಂದ್ರ ಸಿಂಗ್ ಕಾಳಪ್ಪ ಮಾತನಾಡಿ ಪ್ರಸ್ತುತ ದಿನದಲ್ಲಿ ಆರೋಗ್ಯ ಚಿಕಿತ್ಸೆ ವೆಚ್ಚ ದುಬಾರಿಯಾಗಿದೆ. ಗ್ರಾಮೀಣ ಭಾಗದ ಬಡ ಜನತೆಗೆ ಅನುಕೂಲವಾಗಲಿ ಎಂದು ನಮ್ಮ ತಂದೆ ತಾಯಿಯರ ಸ್ಮ ರಣಾರ್ಥವಾಗಿ 18 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇನೆ. ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇನೆ.
ದಿನಾಂಕ 13 -6- 2026 ಎರಡನೇ ಶನಿವಾರದಂದು ಬನ್ನೂರಿನ ರೋಟರಿ ಶಾಲೆ ಆವರಣದಲ್ಲಿ ಉಚಿತ ಕಣ್ಣಿನ ತಪಾಸಣ ಶಿಬಿರವನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದರು.
ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ನುರಿತ ವೈದ್ಯರಿಂದ ತಪಾಸಣೆ ನಡೆಸಿ ಶಸ್ತ್ರ ಚಿಕಿತ್ಸೆಗೆ ಒಳಪಡುವ ರೋಗಿಗಳನ್ನು ನಮ್ಮ ಸಾರಿಗೆ ವ್ಯವಸ್ಥೆಯಲ್ಲಿ ಉಚಿತವಾಗಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಮುಗಿದ ನಂತರ ರೋಗಿಗಳ ಗ್ರಾಮಕ್ಕೆ ವಾಪಸ್ ತಂದು ಬಿಡಲಾಗುವುದು ಎಂದರು.
ಇದೇ ಸಂದರ್ಭ ಕರೋಹಟ್ಟಿ ಗ್ರಾಮಸ್ಥರ ವತಿಯಿಂದ ಸಮಾಜ ಸೇವಕ ಮಹೇಂದ್ರ ಸಿಂಗ್ ಕಾಳಪ್ಪ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.
ವೈದ್ಯರುಗಳಾದ ಡಾ. ಶಿವಾನಿ ನಮಲ, ಡಾ.ಕಾಜೊಲ್ ಪಾಟೀಲ್, ಡಾ.ರೋಷಿಣಿ, ಸಂಯೋಜಕ ಡಾ.ವಿಜಯ್, ಗ್ರಾಮದ ಮುಖಂಡರಾದ ಶಿವಮೂರ್ತಿ ಸೇರಿದಂತೆ ಗ್ರಾಮಸ್ಥರು ಇದ್ದರು.