ಯತೀಂದ್ರ ಸಿದ್ದರಾಮಯ್ಯಗೆ ಡಿಸಿಎಂ ಸ್ಥಾನ ಕೊಡಬೇಕು: ಹೈಕಮಾಂಡ್‌ಗೆ: ಬಿ ಸುಬ್ರಹ್ಮಣ್ಯ ಮನವಿ

ನಂದಿನಿ ಮನುಪ್ರಸಾದ್ ನಾಯಕ್

 

ಯತೀಂದ್ರ ಸಿದ್ದರಾಮಯ್ಯಗೆ ಡಿಸಿಎಂ ಸ್ಥಾನ ಕೊಡಬೇಕು: ಹೈಕಮಾಂಡ್‌ಗೆ: ಬಿ ಸುಬ್ರಹ್ಮಣ್ಯ ಮನವಿ


ಮೈಸೂರು: ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯೊಂದಿಗೆ ಪ್ರಬಲ ಸಚಿವ ಖಾತೆ ನೀಡುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಮನವಿ ಮಾಡಿದ್ದಾರೆ.

ಇಡೀ ಕುರುಬ ಸಮುದಾಯದ ಪರವಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸುಬ್ರಹ್ಮಣ್ಯ ಮನವಿ ಮಾಡಿದ್ದಾರೆ. 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸುದೀರ್ಘ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರು ತಮಗೆ ಶಾಸಕರ ಬಲ ಇದೆ ಅಂತ ಗೊತ್ತಿದ್ದರೂ ಹೈಮಾಂಡ್‌ ಮಾತಿಗೆ ಬದ್ಧರಾಗಿ ರಾಜೀನಾಮೆ ನೀಡಿದರು, ನುಡಿದಂತೆ ನಡೆದುಕೊಂಡಿದ್ದಾರೆ. ತಮಗೆ ಯಾವುದೇ ಸ್ಥಾನಮಾನ ಬೇಡ ಅಂತಲೂ ಹೇಳಿದ್ದಾರೆ. ಆದ್ದರಿಂದ ಯತೀಂದ್ರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು.

ವೈದ್ಯನಾಗಿ ತಮ್ಮ ಪಾಡಿಗೆ ಕೆಲಸ ಮಾಡಿಕೊಂಡಿದ್ದ ಯತೀಂದ್ರ ಅವರು, ಕಾಂಗ್ರೆಸ್‌ ಪಕ್ಷಕ್ಕಾಗಿ ರಾಜಕೀಯ ಪ್ರವೇಶಿಸಿದ್ರು. ಅಂದಿನಿಂದಲೂ ರಾಜಕೀಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕಾಗಿ ದುಡಿದಿದ್ದಾರೆ. ಮೊದಲ ಪ್ರಯತ್ನದಲ್ಲೇ ಶಾಸಕರಾಗಿದ್ದ ಯತೀಂದ್ರ ಅಭಿವೃದ್ಧಿ ಕೆಲಸಗಳನ್ನ ಮಾಡಿ ಜನವಿಶ್ವಾಸ ಗಳಿಸಿಕೊಂಡಿದ್ದರು. 2ನೇ ಅವಧಿಗೆ‌ ತಾವು ಗೆಲ್ಲುವ ವಿಶ್ವಾಸವಿದ್ದರೂ ಪಕ್ಷಕ್ಕಾಗಿ ಕ್ಷೇತ್ರವನ್ನ ತ್ಯಾಗ ಮಾಡಿದರು, ಇವರ ಈ ಸೇವೆಯನ್ನ ಹೈಕಮಾಂಡ್‌ ಪರಿಗಣಿಸಬೇಕು.

ಇತ್ತೀಚೆಗೆ ಮುಕ್ತಾಯಗೊಂಡ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಯಲ್ಲಿ ಸಮರ್ಥ್ ಶಾಮನೂರು ಮತ್ತು ಉಮೇಶ್ ಮೇಟಿ ಅವರ ಗೆಲುವಿಗೆ ಯತೀಂದ್ರ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ರಮಿಸಿದ್ದರು. ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನರಿಗೆ ಮಾಹಿತಿ ತಲುಪಿಸಿದ್ದಲ್ಲದೇ, ಕಾಂಗ್ರೆಸ್‌ ಪಕ್ಷದ ಸಾಧನೆಗಳನ್ನ ಜನರ ಮುಂದಿಟ್ಟು ಮೇಟಿ ಅವರ ಗೆಲುವಿಗೆ ಸಹಕಾರಿಯಾದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಚಾಮರಾಜನಗರ ಮತ್ತು ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಇದೆಲ್ಲವನ್ನ ಹೈಕಮಾಂಡ್‌ ಪರಿಗಣಿಸಬೇಕು.

ಮುಂದೆ ಬಿಬಿಎಂಪಿ, ಜಿಲ್ಲಾ/ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಬೇಕೆಂದ್ರೆ ಅಹಿಂದ ವರ್ಗವನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ. ಅದು ಹಿಂದುಳಿದ ವರ್ಗದ ನಾಯಕ ಉನ್ನತ ಹುದ್ದೆಯಲ್ಲಿದ್ದರೆ ಮಾತ್ರ ಸಾಧ್ಯ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್‌ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಹುದ್ದೆಯೊಂದಿಗೆ ಜನಸೇವೆ ಮಾಡುವಂತ ಉನ್ನತ ಸಚಿವ ಸ್ಥಾನವನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಬಿ ಸುಬ್ರಹ್ಮಣ್ಯ
ಮಾಜಿ ಅಧ್ಯಕ್ಷರು ಕರ್ನಾಟಕ ಪ್ರದೇಶ ಕುರುಬರ ಸಂಘ ಬೆಂಗಳೂರು
9845394933

Leave a Reply

Your email address will not be published. Required fields are marked *