ನಂದಿನಿ ಮನುಪ್ರಸಾದ್ ನಾಯಕ್
ಮೈಸೂರಿನಲ್ಲಿ ಡಾ. ಈ.ಸಿ. ನಿಂಗರಾಜ್ ಗೌಡ ಅವರ ನಿವಾಸದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ.

ಮೈಸೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಕರೆ ಮೇರೆಗೆ ದೇಶಾದ್ಯಂತ ನಡೆಯುತ್ತಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರು ಹಾಗೂ ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಗಳಾದ ಡಾ. ಈ.ಸಿ. ನಿಂಗರಾಜ್ ಗೌಡ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಈ.ಸಿ. ನಿಂಗರಾಜ್ ಗೌಡ ಅವರು, “ತ್ಯಾಗ, ಸಮೃದ್ಧಿ ಮತ್ತು ಶಾಂತಿಯ ಸಂಕೇತವಾಗಿರುವ ತ್ರಿವರ್ಣ ಧ್ವಜ ಹಾಗೂ ‘ವಂದೇ ಮಾತರಂ’ ಘೋಷಣೆ ದೇಶಕ್ಕಾಗಿ ಸಾವಿರಾರು ದೇಶಭಕ್ತರು ತಮ್ಮ ಜೀವನವನ್ನು ತ್ಯಾಗ ಮಾಡಲು ಹಾಗೂ ಕೋಟ್ಯಂತರ ಜನರು ಉತ್ತಮ ಭಾರತ ನಿರ್ಮಾಣಕ್ಕಾಗಿ ಶ್ರಮಿಸಲು ಪ್ರೇರಣೆ ನೀಡಿವೆ” ಎಂದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಕರೆ ದೇಶದ ಪ್ರತಿಯೊಬ್ಬ ನಾಗರಿಕನಲ್ಲೂ ರಾಷ್ಟ್ರಭಕ್ತಿ ಮತ್ತು ದೇಶದ ಅಭಿವೃದ್ಧಿಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ. ‘ವಿಕಸಿತ ಭಾರತ’ ನಿರ್ಮಾಣದ ಗುರಿಯೊಂದಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಬೇಕು ಎಂದು ಅವರು ಕರೆ ನೀಡಿದರು.
ರಾಷ್ಟ್ರಧ್ವಜದ ಗೌರವವನ್ನು ಕಾಪಾಡುವುದರ ಜೊತೆಗೆ ದೇಶದ ಏಕತೆ, ಅಖಂಡತೆ, ಶಾಂತಿ ಮತ್ತು ಸಮೃದ್ಧಿಗಾಗಿ ಎಲ್ಲರೂ ಸಂಕಲ್ಪ ತೊಡಬೇಕು ಎಂದು ಡಾ. ಈ.ಸಿ. ನಿಂಗರಾಜ್ ಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.