ಯುವ ದಸರಾ ಉದ್ಘಾಟನೆಗೆ ಖ್ಯಾತ ನಟ, ನೃತ್ಯ ನಿರ್ದೇಶಕ ಪ್ರಭುದೇವ ಅವರಿಗೆ ಅಧಿಕೃತ ಆಹ್ವಾನ

ನಂದಿನಿ ಮನುಪ್ರಸಾದ್ ನಾಯಕ್

 

*ಯುವ ದಸರಾ ಉದ್ಘಾಟನೆಗೆ ಖ್ಯಾತ ನಟ, ನೃತ್ಯ ನಿರ್ದೇಶಕ ಪ್ರಭುದೇವ ಅವರಿಗೆ ಅಧಿಕೃತ ಆಹ್ವಾನ*


ಮೈಸೂರು: ಮೈಸೂರು ಯುವ ದಸರಾ 2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾರತದ ಖ್ಯಾತ ನೃತ್ಯಗಾರ, ನೃತ್ಯ ನಿರ್ದೇಶಕ, ನಟ ಹಾಗೂ ಚಿತ್ರ ನಿರ್ದೇಶಕರಾದ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.

ಯುವ ದಸರಾ ಸಮಿತಿಯ ಕಾರ್ಯಧ್ಯಕ್ಷ ಶ್ರೀ ಸೋಮಶೇಖರ್, ಕಾರ್ಯದರ್ಶಿಗಳಾದ ಶ್ರೀ ಅರುಣ್ ಹಾಗೂ ಶ್ರೀ ಸತ್ಯಮೂರ್ತಿ ಅವರು ಚೆನ್ನೈನಲ್ಲಿರುವ ಪ್ರಭುದೇವ ಅವರ ನಿವಾಸಕ್ಕೆ ತೆರಳಿ,
ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನಿಸಿದರು.

ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದ ಪ್ರಭುದೇವ ಅವರು ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸಲು ತಮ್ಮ ಒಪ್ಪಿಗೆಯನ್ನು ವ್ಯಕ್ತಪಡಿಸಿದ್ದಾರೆ.
ಅವರ ಆಗಮನವು ಯುವ ದಸರಾ ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಲಿದೆ.

Leave a Reply

Your email address will not be published. Required fields are marked *