ನಂದಿನಿ ಮನುಪ್ರಸಾದ್ ನಾಯಕ್
ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಮಾಜಿ ಶಾಸಕರು ಹಾಗೂ ಬಿಜೆಪಿ ನಗರಾಧ್ಯಕ್ಷರೂ ಆದ ಎಲ್ ನಾಗೇಂದ್ರ ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ಶ್ರೀ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿದರಲ್ಲದೇ, ಇದೇ ವೇಳೆ ಅಮಾವಾಸ್ಯೆ ಪೂಜೆಗೆ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿತರಿಸಿದರು.ಈ ಸಂದರ್ಭದಲ್ಲಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
