ಮೈಸೂರು:10 ಜನವರಿ 2022
ನಂದಿನಿ
ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.ದ ಕೇಂದ್ರ ಕಚೇರಿಯಲ್ಲಿ “ಮೈಸೂರು ಜಿಲ್ಲಾ ಭಾರತೀಯ ಶೈಲಿ ಕುಸ್ತಿ ಸಂಘ ಹಾಗೂ ಮೈಸೂರು ಜಿಲ್ಲಾ ಕುಸ್ತಿ ಸಂಘ”ದ 2022ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಭಾರತೀಯ ಶೈಲಿ ಕುಸ್ತಿ ಸಂಘದ ಅಧ್ಯಕ್ಷರಾದ ಪೈಲ್ವಾನ್ ಚಂದ್ರಶೇಖರ್, ಮೈಸೂರು ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷರಾದ ಪೈಲ್ವಾನ್ ಮಂಜುನಾಥ್, ಪೈಲ್ವಾನ್ ದೊರೆಸ್ವಾಮಿ, ಪೈಲ್ವಾನ್ ಶ್ರೀನಿವಾಸಗೌಡ, ಪೈಲ್ವಾನ್ ಸ್ಟಾರ್ ವೆಂಕಟೇಶ್ ಇತರರು ಉಪಸ್ಥಿತರಿದ್ದರು.