ಮೈಸೂರು:25 ಮಾರ್ಚ್ 2022
ನಂದಿನಿ ಮೈಸೂರು
ಮಾ.27 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದಿಂದ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಮಾರ್ಚ್ 27 ರಂದು ಧನ್ವಂತರಿ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಹಾಗೂ ಕುಟುಂಬದವರಿಗೆ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದೆ.ಬೆ.9 ರಿಂದ ಸಂಜೆ 4 ವರಗೆ ನಡೆಯಲಿದೆ.ಮೈಸೂರು ಜಿಲ್ಲಾಧಿಕಾರಿಗಳು ಶಿಬಿರಕ್ಕೆ ಆಗಮಿಸಲಿದ್ದಾರೆ.ನೌಕರರು ಆರೋಗ್ಯ ತಪಾಸಣೆ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು. ಜೊತೆಗೆ 2022 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ರೇವಣ್ಣ, ಉಪಾಧ್ಯಕ್ಷ ಮಾಲಂಗಿ ಸುರೇಶ್, ಕಾರ್ಯಾಧ್ಯಕ್ಷ ಆನಂದ್,ಖಜಾಂಚಿ ರಮೇಶ್ ಕುಮಾರ್
ಕ್ರೀಡಾ ಕಾರ್ಯದರ್ಶಿ ಗಿರೀಶ್ ಹಾಜರಿದ್ದರು.