ಮೈಸೂರು:30 ಏಪ್ರಿಲ್ 2022
ನಂದಿನಿ ಮೈಸೂರು
ಹಿಂದುಳಿದ ವರ್ಗಗಳು ಹಾಗೂ ಶೋಷಿತ ಸಮುದಾಯಗಳ ಐಕ್ಯತಾ ಸಮಾವೇಶದ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
ಮೇ 4 ರಂದು ಮೈಸೂರಿನ ಜೆ.ಕೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ನಡೆಯಲಿರುವ ಐಕ್ಯತಾ ಸಮಾವೇಶದ ಪ್ರಚಾರ ವಾಹನಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಪುರಭವನದಲ್ಲಿ
ಚಾಲನೆ ನೀಡಿದರು.
ಹಿಂದುಳಿದ ವರ್ಗಗಳ ಸ್ಥಳೀಯ ರಾಜಕೀಯ ಮೀಸಲಾತಿ ರಕ್ಷಣೆ ಆಗಬೇಕಿದೆ. ರಾಜಕೀಯ ಮೀಸಲಾತಿ ಉಳಿವಿಗಾಗಿ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಐಕ್ಯತಾ ಸಮಾವೇಶ ನಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ.ಹಿಂದುಳಿದ ವರ್ಗಗಳು ಹಾಗೂ ಶೋಷಿತ ಸಮಾಜದ 10 ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್ ಶಿವರಾಮ್ ಐಕ್ಯತಾ ಸಮಾವೇಶ ಪ್ರಚಾರ ವಾಹನ ಸಂಚಾರ ಮಾರ್ಗದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡರು,ಕಾರ್ಯಕರ್ತರು ಭಾಗಿಯಾಗಿದ್ದರು.