ಕೃಷ್ಣರಾಜಪೇಟೆ:25 ಆಗಸ್ಟ್ 2022
ನಂದಿನಿ ಮೈಸೂರು
*ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರ ಹುಟ್ಟು ಹಬ್ಬ ಆಚರಣೆ.
ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯಲ್ಲಿ ನಡೆದ ಹುಟ್ಟು ಹಬ್ಬ ಕಾರ್ಯಕ್ರಮ. ಮುಗಿಲು ಮುಟ್ಟಿದ ಸಂಭ್ರಮ*
ಕೃಷ್ಣರಾಜಪೇಟೆ ತಾಲ್ಲೂಕಿನ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯಲ್ಲಿ ಸಚಿವ ಡಾ.ನಾರಾಯಣಗೌಡರ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್.ಅಶ್ವಥಿ ಅವರ ಸರಳವಾಗಿ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.
ಸಚಿವ ಡಾ.ನಾರಾಯಣಗೌಡ ಅಭಿಮಾನಿ ಬಳಗದ ಅಧ್ಯಕ್ಷ ಚಂದ್ರಮೋಹನ್ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರ ಹುಟ್ಟು ಹಬ್ಬದ ಸರಳ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ನಾರಾಯಣಗೌಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್, ಸಚಿವರ ಆಪ್ತಕಾರ್ಯದರ್ಶಿ ಪ್ರಭಾಕರ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿದ್ದರು.
ಸಚಿವ ನಾರಾಯಣಗೌಡ ಅವರು ಹೂಗುಚ್ಚವನ್ನು ನೀಡಿ ಜಿಲ್ಲಾಧಿಕಾರಿ ಅಶ್ವಥಿ ಅವರನ್ನು ಅಭಿನಂದಿಸಿ ಮಾತನಾಡಿ ದಕ್ಷ ಆಡಳಿತಗಾರಗಾಗಿ ಮಂಡ್ಯ ಜಿಲ್ಲೆಯ ಮನೆಮಗಳಂತೆ ಪ್ರಾಮಾಣಿಕವಾಗಿ ಜಿಲ್ಲಾಧಿಕಾರಿ ಅಶ್ವಥಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದು ಕೆ.ಆರ್.ಪೇಟೆ ತಾಲ್ಲೂಕಿನ ಪವಿತ್ರ ಸಂಗಮ ಕ್ಷೇತ್ರದಲ್ಲಿ ಅಕ್ಟೋಬರ್ 13,14, 15 ರಂದು ಮಹಾಕುಂಭ ಮೇಳವನ್ನು ಹರ,ಚರ, ಗುರುಗಳ ನೇತೃತ್ವದಲ್ಲಿ ಆಚರಿಸಲು ಸಿದ್ಧತೆ ನಡೆದಿದ್ದು ಪೂರ್ವಭಾವಿ ಸಭೆಯನ್ನು ಚಿಕ್ಕೋನಹಳ್ಳಿಯ ರೇಷ್ಮೆ ತರಬೇತಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಇದೇ ದಿನ ಜಿಲ್ಲಾಧಿಕಾರಿಗಳ ಹುಟ್ಟು ಹಬ್ಬವು ಇರುವುದು ನನಗೆ ಗೊತ್ತಿರಲಿಲ್ಲ, ಬಹಳ ಅಚ್ಚುಕಟ್ಟಾಗಿ ಶಿಸ್ತುಬದ್ಧವಾಗಿ ತಾಲ್ಲೂಕು ಆಡಳಿತ ಹಾಗೂ ನಮ್ಮ ಅಭಿಮಾನಿ ಬಳಗದ ನೇತೃತ್ವದಲ್ಲಿ ಹುಟ್ಟು ಹಬ್ಬವನ್ನು ಆಚರಿಸಲಾಗುತ್ತಿದೆ. ಜಿಲ್ಲೆ ಹಾಗೂ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಶುಭ ಹಾರೈಸಿದ್ದಾರೆ. ಜಿಲ್ಲಾಧಿಕಾರಿಗಳ ಪ್ರಾಮಾಣಿಕ ಸೇವೆ, ಬಡಜನರ ಕಣ್ಣೀರೊರೆಸುವ ಕಾಳಜಿ, ಬದ್ಧತೆಯು ಇತರೆ ಅಧಿಕಾರಿಗಳಿಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಅಶ್ವಥಿ ಅವರ ಕಾರ್ಯದಕ್ಷತೆಯನ್ನು ಸಚಿವರು ಪ್ರಶಂಸಿಸಿದರು.
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ ಕೆ.ಜಿ.ತಮ್ಮಣ್ಣ,
ನಾಗಮಂಗಲ ಡಿವೈಎಸ್ ಪಿ ಶಿವಲಿಂಗಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸರಸ್ವತಿ, ರೇಷ್ಮೆ ಇಲಾಖೆಯ ಉಪನಿರ್ದೇಶಕಿ ಜಿ.ಆರ್.ಪ್ರತಿಭಾ, ತಾ.ಪಂ ಇಓ ಸತೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.