ನಂದಿನಿ ಮೈಸೂರು
ಚಾಮರಾಜ ವಿಧಾನಸಭಾ ಕ್ಷೇತ್ರ ದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸಿದ್ದರಾಜು ಎಚ್ ಡಿ ರವರು ಇಂದು ನಾಮಪತ್ರ ಸಲ್ಲಿಸಿದರು.
ಮೈಸೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ಮೂಲ ದಾಖಲೆಗಳನ್ನು ನೀಡುವ ಮೂಲಕ ನಾಮಪತ್ರವನ್ನು ಸಲ್ಲಿಸಿದರು.
ಇದೇ ಸಂದರ್ಭ ಮಾತನಾಡಿದ ಅವರು ಚಾಮರಾಜ
ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಚಾಮರಾಜ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ.
ಸುಮಾರು ವರ್ಷಗಳಿಂದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ.ಕ್ಷೇತ್ರದ ಜನರಿಗೆ ಸೂಕ್ತವಾದ ಸೂರಿಲ್ಲ ಸೂರು ನಿರ್ಮಿಸಿಕೊಡುವುದು ನನ್ನ ಉದ್ದೇಶ.ಜನರು ಕೈ ಬಿಡುವುದಿಲ್ಲ ಎಂಬ ನಂಬಿಕೆ ಮತ್ತು ವಿಶ್ವಾಸವಿದೆ.
ಅಲ್ಲದೆ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತೇನೆ.
ಕ್ಷೇತ್ರದ ಜನರಿಗೆ ಮೂಲಭೂತ ವ್ಯವಸ್ಥೆಗಳು ಸಿಗುವಂತಾಗಬೇಕು ಎಂದು ತಿಳಿಸಿದರು.