ನಾಡಹಬ್ಬ ದಸರಾ ಕಾರ್ಯಕ್ರಮಗಳ ವಿವರ ಇಲ್ಲಿದೆ

ನಂದಿನಿ ಮೈಸೂರು

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು
* ದಸರಾ ಮಹೋತ್ಸವ 2023 ರ ಉದ್ಘಾಟನೆಯನ್ನು ನಾದಬ್ರಹ್ಮ ಡಾ.ಹಂಸಲೇಖ ಅವರು ಚಾಮುಂಡಿ ದೇವಿಯ ಅಗ್ರ ಪೂಜೆಯೊಂದಿಗೆ ದಿನಾಂಕ 15-10-2023ರಂದು ಬೆಳಿಗ್ಗೆ 10.15 ರಿಂದ 10.36 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನ ದಲ್ಲಿ ನೆರವೇರಿಸಲಿದ್ದಾರೆ

ಅಕ್ಟೋಬರ್ 15 ರಂದು ಬೆಳಗ್ಗೆ 11:30ಕ್ಕೆ ಕರ್ನಾಟಕ ಕಲಾಮಂದಿರದಲ್ಲಿ ಮೈಸೂರು ದಸರಾ ಚಲನಚಿತ್ರೋತ್ಸವ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಸಚಿವರು ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪನವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಚಲನಚಿತ್ರ ಕಲಾವಿದರು ಹಾಗೂ ಸಂಗೀತ ನಿರ್ದೇಶಕರಾದ ಸಾಧುಕೋಕಿಲ, ಹಿರಿಯ ಚಲನಚಿತ್ರ ಕಲಾವಿದರಾದ ಸುಧಾ ನರಸಿಂಹರಾಜು, ಚಲನಚಿತ್ರ ಕಲಾವಿದರಾದ ಮಿಲನ ನಾಗರಾಜ್, ಡಾರ್ಲಿಂಗ್ ಕೃಷ್ಣ, ಮಾನ್ವಿತಾ ಕಾಮತ್, ಮಯೂರಿ ಕ್ಯಾತರಿ ಹಾಗೂ ವೈಭವಿ ಶಾಂಡಿಲ್ಯ ಭಾಗವಹಿಸುವರು.

ಅಕ್ಟೋಬರ್ 15 ರಂದು ಮಧ್ಯಾಹ್ನ 12:30 ಕ್ಕೆ ನಗರದ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಸಚಿವರು ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 15 ರಂದು ಮಧ್ಯಾಹ್ನ 1 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಎಚ್ ಮುನಿಯಪ್ಪ ನೆರವೇರಿಸುವರು.

ಅಕ್ಟೋಬರ್ 15 ರಂದು ಸಂಜೆ 4 ಗಂಟೆಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಶ್ರೀ ದೇವರಾಜ್ ಅರಸು ವಿವಿಧ ದೇಶ ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 15 ರಂದು ಸಂಜೆ 4:30ಕ್ಕೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ದಸರಾ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 15 ರಂದು ಸಂಜೆ 5:00 ಗಂಟೆಗೆ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಭವನದಲ್ಲಿ ಯೋಗ ದಸರಾ ಕಾರ್ಯಕ್ರಮ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವರು.

 

ಅಕ್ಟೋಬರ್ 15 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಅಖಿಲ ಭಾರತ ಹಾಗೂ ರಾಜ್ಯಮಟ್ಟದ ಚಿತ್ರ ಶಿಲ್ಪಕಲಾ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 15 ಸಂಜೆ 5.30 ಕ್ಕೆ ಕರ್ನಾಟಕಕಲಾಮಂದಿರದಲ್ಲಿ ನವರಾತ್ರಿ ರಂಗೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 15 ರಂದು ಸಂಜೆ 6 ಗಂಟೆಗೆ ನ್ಯೂ ಸಯಾಜಿ ರಾವ್ ರಸ್ತೆಯಲ್ಲಿರುವ ಹಸಿರು ಮಂಟಪದಲ್ಲಿ ದಸರಾ ವಿದ್ಯುತ್ ದೀಪ ಅಲಂಕಾರ ಕಾರ್ಯಕ್ರಮವನ್ನು ಉದ್ಘಾಟಿಸಲಾಗುವುದು.

ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 15 ರಂದು ಸಂಜೆ 7 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ದಸರಾ ಸಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಘನ ಉಪಸ್ಥಿತಿಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಪಾಲ್ಗೊಳುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀ ವತ್ಸ ವಹಿಸಲಿದ್ದಾರೆ.

*ಮಾಧ್ಯಮ ಆಹ್ವಾನ-11*
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 15 ರಿಂದ 22 ರವರೆಗೆ ದಸರಾ ಪುಸ್ತಕ ಮಾರಾಟ ಮೇಳವನ್ನು ನಗರದ ಓವೆಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್ 15ರಂದು ಸಂಜೆ 5 ಗಂಟೆಗೆ ಮಾರಾಟ ಮೇಳ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರು ನೆರವೇರಿಸುವರು.

ಹಾಗೂ ಮೈಸೂರು ದಸರಾ ಮಹೋತ್ಸವ 2023ರ ದಿನಾಂಕ:24-10-2023 ರಂದು ಮಂಗಳವಾರ ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಸಂಜೆ 4.40 ರಿಂದ 5.00 ರವರೆಗೆ‌ ಅರಮನೆ ಆವರಣದಲ್ಲಿ ವಿಜಯದಶಮಿ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ

*ಈ ಕಾರ್ಯಕ್ರಮಗಳು ಯೂಟ್ಯೂಬ್ ನತ್ತು ವೆಬ್‌ಸೈಟ್ ‌ನಲ್ಲಿ ದಿನಾಂಕ: 15-10-2023 ರಿಂದ 24-10-2023 ರವರಗೆ ನೇರ ಪ್ರವಾಸವಾಗಲಿದೆ.

Leave a Reply

Your email address will not be published. Required fields are marked *