ನಂದಿನಿ ಮೈಸೂರು
ಮೈಸೂರಿನ ಕೆಎಸ್ ಆರ್ ಪಿ ಮೈದಾನದಲ್ಲಿ
ನವಕೀಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಕ್ರೀಡಾ ದಿನಾಚಾರಣೆಗೆ
ಡಿಡಿಪಿಐ ಹೆಚ್.ಕೆ.ಪಾಂಡು ಹಾಗೂ
ಸಮಾಜ ಸೇವಕರು,
ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ರಾದ ಡಾ. ಮಹೇಂದ್ರ ಸಿಂಗ್ ಕಾಳಪ್ಪರವರು ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.ವಿದ್ಯಾರ್ಥಿಗಳು ಪಥಸಂಚಲನ ನಡೆಸಿ ಅಥಿತಿ ಗಣ್ಯರಿಗೆ ಗೌರವವಂದನೆ ಸಲ್ಲಿಸಿದರು.
ಮಹೇಂದ್ರ ಸಿಂಗ್ ಕಾಳಪ್ಪ ಮಾತನಾಡಿ ನವಕೀಸ್ ಶಿಕ್ಷಣ ಸಂಸ್ಥೆ ನಗರ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಅತ್ಯುತ್ತಮ ಶಿಕ್ಷಣ ನೀಡುತ್ತಾ ಬಂದಿದೆ.ಶಿಕ್ಷಣದ ಜೊತೆಗೆ ಕ್ರೀಡೆ ಕೂಡ ಇರಬೇಕು.
ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವ ಆಸಕ್ತಿ ಹೊಂದಿರಬೇಕು.ಶಿಕ್ಷಣ ಎಷ್ಟು ಮುಖ್ಯವೂ ಕ್ರೀಡೆಯೂ ಕೂಡ ಅಷ್ಟೇ ಮುಖ್ಯವಾಗಿರುತ್ತದೆ.ನವಕೀಸ್ ಶಿಕ್ಷಣ ಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲಿ ಎಂದು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ನವಕೀಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಿ. ಎಸ್.ತರಕೇಶ್ವರಿ,ಸಂತೋಷ್ ಕನ್ವರ್(ಚಂದು)ಕಾಳಪ್ಪ,ರಾಜ್ಯ ಭಾರತ್ ಸ್ಕೌಟ್ ಅಂಡ್ ಗೈಡ್ ನ ಜಿಲ್ಲಾ ಸಂಘದ ಜಿಲ್ಲಾ ಸಂಘಟಕರಾದ ಡಾ.ರಾಮ್ ಪ್ರಸಾದ್,ಡಾ. ಸೌಮ್ಯ,ವ್ಯವಸ್ಥಾಪಕರುಗಳಾದ ಮಹೇಶ್,ಅನೂಪ್,ರವರು ಸೇರಿದಂತೆ ನವಕೀಸ್ ಶಿಕ್ಷಣ ಸಂಸ್ಥೆಯ ಅಧ್ಯಾಪಕ ವೃಂದದವರು ಹಾಜರಿದ್ದರು.