ನಂದಿನಿ ಮೈಸೂರು
*ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಗೆ ಮತ*
ಸಮಸ್ತ ಭಾರತೀಯರನ್ನು ಸಂರಕ್ಷಿಸುತ್ತಿರುವ ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ರಚಿಸಿರುವ ಭಾರತದ ಸಂವಿಧಾನದ ಉಳಿವಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿಶ್ವಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ ಜನಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೆ. ಮಹೇಶ್ ಮನವಿ ಮಾಡಿದರು.
ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘ ಪರಿವಾರದವರು ವಿರೋಧ ಮಾಡುತ್ತಿದ್ದಾರೆ. ರಾಷ್ಟ್ರದ ರಾಜಧಾನಿಯಲ್ಲಿ ಸಂವಿಧಾನದ ಪ್ರತಿ ಸುಡಲಾಯಿತು. ಕೇಂದ್ರದ ಸಚಿವರಾಗಿದ್ದವರು ಸಂವಿಧಾನ ಬದಲಿಸುವ ಹೇಳಿಕೆಗಳನ್ನು ನೀಡಿದ್ದರು. ಹಾಗಾಗಿ ಈ ಚುನಾವಣೆ ಸಂವಿಧಾನ ಪರ ಮತ್ತು ಸಂವಿಧಾನ ವಿರೋಧಿಗಳ ನಡುವಿನ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.
ಸಂವಿಧಾನ ಬದಲಿಸುವ ಮಾತುಗಳನ್ನಾಡುವ ನಾಯಕರ ಪಕ್ಷವಾದ ಬಿಜೆಪಿಗೆ ದಲಿತ ಜನಾಂಗದವರು ಮತ ಕೊಡಬಾರದು. ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡುತ್ತೇನೆ.
ಕೇಂದ್ರದ ಮೋದಿ ಸರ್ಕಾರ ಕಳೆದ 10 ವರ್ಷಗಳಿಂದ ನಿರಂತರವಾಗಿ ಕರ್ನಾಟಕದ ಮೇಲೆ ತಾರತಮ್ಯ ಮಾಡುತ್ತಿದೆ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡಿದೆ. ತನ್ನ ವಿರುದ್ಧದ ಹೋರಾಟವನ್ನು ದಮನ ಮಾಡುತ್ತಿದೆ. ಈ ವರ್ಷ ಭೀಕರ ಬರಗಾಲದಲ್ಲೂ ರಾಜ್ಯದ ನೆರವಿಗೆ ಬಂದಿಲ್ಲ. ಸುಳ್ಳುಗಳನ್ನು ಹೇಳುತ್ತ ದೇಶದ ಜನರ ವಂಚನೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ನುಡಿದಂತೆ ನಡೆದ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬದ್ಧವಾಗಿರುವ ಹಿಂದುಳಿದವರು, ಬಡವರು, ಅಲ್ಪಸಂಖ್ಯಾತರು, ದಲಿತರ ಪರವಾಗಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕಾದರೆ ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು.
ನಾಲ್ಕು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರುವ ಮೈಸೂರು ಕೊಡಗು ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ್ ಮತ್ತು ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ಸುಪುತ್ರ ಸುನಿಲ್ ಬೋಸ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.