110 Views
ಟೋಕಿಯೋ: ಕೋಟ್ಯಾಂತರ ಭಾರತೀಯರ ಪ್ರಾರ್ಥನೆಯಂತೆ ಪ್ರಸಕ್ತ ಆವೃತ್ತಿಯ ಟೋಕಿಯೋ ಒಲಂಪಿಕ್ಸ್ ಟೂರ್ನಿಯಲ್ಲಿ ಭಾರತದ ಚಿನ್ನದ ಪದಕದ ಕನಸು ಕಡೆಗೂ ನನಸಾಗಿದೆ.
ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು, ಒಲಿಂಪಿಕ್ಸ್ನಲ್ಲಿ ಇತಿಹಾಸ ಬರೆದಿದ್ದಾರೆ.

ಶನಿವಾರ ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯ ಪುರುಷರ ವಿಭಾಗದ ಫೈನಲ್ ನಲ್ಲಿ 87.58 ಮೀಟರ್ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.