ಮೈಸೂರು:2 ಫೆಬ್ರವರಿ 2022
ನಂದಿನಿ ಮೈಸೂರು
ಕಾರು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಿಳಿಕೆರೆಯಲ್ಲಿ ನಡೆದಿದೆ.
ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತ ದುರ್ದೈವಿಗಳು.ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳಾಗಿರುವ
ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಬಿಳಿಕೆರೆ ಬಳಿ ಅಪಘಾತ ನಡೆದಿದೆ.
ಈ ವೇಳೆ ಕಾರಿನಲ್ಲಿದ್ದ ಮೌಳೇಶ್ವರ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದರೆ ತೇಜಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.ಇಬ್ಬರು ವಿದ್ಯಾರ್ಥಿಗಳಿಗೆ ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.