ಅಧಿಪತ್ರ ಹೊರಡಿಸಿದ ರಾಕ್ ಸ್ಟಾರ್….ಹುಟ್ಟುಹಬ್ಬಕ್ಕೆ ಅನೌನ್ಸ್ ಆಯ್ತು ರೂಪೇಶ್ ಶೆಟ್ಟಿ ಹೊಸ ಸಿನಿಮಾ

ನಂದಿನಿ ಮೈಸೂರು

*ಅಧಿಪತ್ರ ಹೊರಡಿಸಿದ ರಾಕ್ ಸ್ಟಾರ್….ಹುಟ್ಟುಹಬ್ಬಕ್ಕೆ ಅನೌನ್ಸ್ ಆಯ್ತು ರೂಪೇಶ್ ಶೆಟ್ಟಿ ಹೊಸ ಸಿನಿಮಾ*

ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್ ಸ್ಟಾರ್ ಹೊಸ ಹೆಜ್ಜೆಗೆ ಅಧಿಪತ್ರ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

 

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ ಎಂಬುವರು ಅಧಿಪತ್ರ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ನಡಿಯಲ್ಲಿ ತಯಾರಾಗ್ತಿರುವ ಅಧಿಪತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ.

 

ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಅಧಿಪತ್ರ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

ರೂಪೇಶ್ ಶೆಟ್ಟಿ ಡೇಂಜರ್ ಝೋನ್, ನಿಶ್ಯಬ್ದ-2, ಅನುಷ್ಕಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅಧಿಪತ್ರ‌ ಮೂಲಕ ಹೊಸ ಬಗೆಯ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರಲಿದ್ದಾರೆ.

Leave a Reply

Your email address will not be published. Required fields are marked *