ಸಚಿವ ಅಶ್ವತ್ ನಾರಾಯಣ್ ವಿರುದ್ಧ ಪ್ರತಿಭಟನೆ

ನಂದಿನಿ ಮೈಸೂರು

ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯನವರ ವಿರುದ್ಧ ಟಿಪ್ಪುವನ್ನು ಕೊಂದಂತೆ ಸಿದ್ದರಾಮಯ್ಯರನ್ನು ಕೊಲ್ಲಬೇಕು ಎಂದು ಅವಹೇಳನಕಾರಿ ಮತ್ತು ಪ್ರಚೋದನೆಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ರವರ ವಿರುದ್ಧ
ಕಾಂಗ್ರೆಸ್ ಕಚೇರಿಯ ಮುಂಭಾಗ
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡು ಅವರ ರಾಜೀನಾಮೆಗೆ ಆಗ್ರಹ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್ಎಂ ನವೀನ್ ಕುಮಾರ್ ರವರು, ಅಶ್ವಥ್ ನಾರಾಯಣ್ ರವರು ನುಡಿದಿರುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು ಭಾರತೀಯ ದಂಡ ಸಂಹಿತೆ 108 ಮತ್ತು 505 ಅಡಿಯಲ್ಲಿ ಈ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಲ್ಬಾಡ್, ಮೈಸೂರಿನ ನಗರ ಕಾಂಗ್ರೆಸ್ ಅಧ್ಯಕ್ಷರಾದ ಅಬ್ರಾರ್, ಕಾಂಗ್ರೆಸ್ ಮುಖಂಡರಾದ ರವಿಕುಮಾರ್, ರಾಜೇಶ್ ಎಂ, ದೀಪಕ್ ಶಿವಣ್ಣ,ಪೈಲ್ವಾನ್ ಸುನಿಲ್, ರಾಕೇಶ್ ಗೌಡ, ಮಲ್ಲೇಶ, ಭರತ್, ಆನಂದ್, ಉಮೇಶ್ ಹಾಗೂ ಮುಂತಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *