ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ಆಗ್ರಹ

 

 

ಮೈಸೂರಿನ ಹೊರವಲಯದ ಚಾಮುಂಡಿ ಬೆಟ್ಟದ ಬಳಿ ಯುವತಿ ಮೇಲೆ ಗುಂಪು ಅತ್ಯಾಚಾರ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ಆಗ್ರಹ

ಮೈಸೂರಿನಲ್ಲಿ ಈಚೆಗೆ ನಡೆದ ಡಕಾಯಿತಿ ಮತ್ತು ಶೂಟೌಟ್ ಪ್ರಕರಣವು ಜನರ ಮನಸ್ಸಿನಿಂದ ಮಾಸುವ ಮೊದಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಜನತೆಯನ್ನು ಬೆಚ್ಚಿಬೀಳಿಸಿದೆ. ಪ್ರೇಕ್ಷಣೀಯ ಸ್ಥಳವಾದ ಮೈಸೂರಿನಲ್ಲಿ ಹಲವಾರು ವಿದ್ಯಾರ್ಥಿನಿಯರು ಹೊರಗಡೆ ಹೋದಾಗ ಹುಡುಗರು ಹಿಂಬಾಲಿಸುವುದು ಹಾಗೂ ಚುಡಾಯಿಸುವುದನ್ನು ಮಾಡುತ್ತಿದ್ದು, ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ನಗರದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ. ನಗರದ ಇಂತಹ ಸ್ಥಳಗಳಲ್ಲಿ ಹಲವಾರು ಸ್ಥಳಗಳಿಗೆ ಪೊಲೀಸ್ ವಾಹನದ ಗಸ್ತು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಮೈಸೂರು ಶೈಕ್ಷಣಿಕ ಕೇಂದ್ರವಾಗಿದ್ದು, ಬೇರೆ ರಾಜ್ಯಗಳಿಂದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಇಂತಹ ಘಟನೆಗಳಿಂದ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳುಹಿಸಲು ಹಿಂದೇಟು ಹಾಕಬಹುದು. ಆದ್ದರಿಂದ ಘಟನೆಗಳು ಮತ್ತೆ ಮರುಕಳಿಸದಂತೆ ಆಡಳಿತವರ್ಗ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲ ವಿದ್ಯಾರ್ಥಿನಿಯರಿಗೂ ಸೂಕ್ತವಾದ ಭದ್ರತೆಯನ್ನು ಒದಗಿಸಬೇಕು ಎಂದರು.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಗೆ ನೆರವು, ಪರಿಹಾರ ಒದಗಿಸಬೇಕು, ಉಗ್ರಪ್ಪ ಸಮಿತಿ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಬೇಕು, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆವ ದೌರ್ಜನ್ಯ ತಡೆಗಟ್ಟಬೇಕು, ಅವರ ಮೇಲಿನ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು

ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *