ಮೈಸೂರು: 9 ಆಗಸ್ಟ್ 2022
ನಂದಿನಿ ಮೈಸೂರು
ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ಎಐಸಿಸಿ ಸೂಚನೆ ಮೇರೆಗೆ ಭಾರತದ ಎಲ್ಲಾರಾಜ್ಯಗಳಲ್ಲೂ
ಆಗಸ್ಟ್ ೧೫ ರಂದು ಎಐಸಿಸಿ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮೈಸೂರು ನಗರ ಕಾಂಗ್ರೆಸ್ ಉಸ್ತುವಾರಿ ಎಸ್ .ಇ.ಸುದೀಂದ್ರ ತಿಳಿಸಿದರು.
ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಆಗಸ್ಟ್15 ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ಆಯೋಜಿಸಲಾಗಿದೆ.
ಪಾದಯಾತ್ರೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹೊರಟು ನ್ಯಾಷನಲ್ ಕಾಲೇಜ್ ಮೈದಾನದ ವರೆಗೂ ಸಾಗಲಿದೆ.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಎಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಈ ಬೃಹತ್ ಪಾದಯಾತ್ರೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ.
ಮೈಸೂರು ನಗರ ಭಾಗದದಿಂದ 5 ರಿಂದ 10 ಸಾವಿರ ಜನ ಭಾಗವಹಿಸಬೇಕು.
ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮೈಸೂರು ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಶಿವಣ್ಣ,ಭಾಸ್ಕರ್ ಗೌಡ,ಈಶ್ವರ್ ಚಕ್ಕಡಿ,ನಾಗೇಶ್ ಕಾರ್ಯಪ್ಪ,ರಘು ರಾಜೇ ಅರಸ್,ಸಿಎಸ್ ರಘು ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.