ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರದ ಅಭಿವೃದ್ಧಿ ಪಡಿಸುವಂತೆ ಸಿಎಂ ಸಿದ್ದರಾಮಯ್ಯನವರಲ್ಲಿ ಮನವಿ ಮಾಡುತ್ತೇವೆ: ವರುಣ ಮಹೇಶ್

ನಂದಿನಿ ಮೈಸೂರು

ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರದ ಅಭಿವೃದ್ಧಿ ಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡುತ್ತೇವೆ : ವರುಣ ಮಹೇಶ್

ಬದನವಾಳು:ದೇಶಕ್ಕೆ ಸ್ವಾತಂತ್ರ ತಂದುಕೊಟ್ಟಂತಹ ಮಹಾತ್ಮ ಗಾಂಧೀಜಿಯವರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಹೋಗಿದ್ದ ಗಾಂಧೀಜಿ ಅವರ ನೆನಪಾರ್ತವಾಗಿ ಗ್ರಾಮದಲ್ಲಿ ಸುಮಾರು 5 ಎಕರೆ ಜಮೀನು ಹೊಂದಿರುವ ಖಾದಿ ಗ್ರಾಮೋದ್ಯೋಗ ಚರಕದಲ್ಲಿ ನೂಲು ಹರಿಯುವ ಮೂಲಕ ಖಾದಿ ಭಟ್ಟ ತಯಾರಾಗುವ ಈ ಕೇಂದ್ರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ನೇಕಾರರ ಸಹಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅವರ ಗಮನಕ್ಕೆ ತಂದು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಒತ್ತಾಯ ಮಾಡುವುದಾಗಿ ಕೆಪಿಸಿಸಿ ಕಾರ್ಯದರ್ಶಿ, ವೀರಶೈವ ಮುಖಂಡ ವರುಣ ಮಹೇಶ್ ತಿಳಿಸಿದರು.

ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನದ ಪ್ರಯುಕ್ತ ಈ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸೀರೆಗಳು ಹಾಗೂ ಸಿಹಿಯನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಜಿ ಸಂಸದ ದಿವಂಗತ ಧ್ರುವನಾರಾಯಣ್ ರವರು ಭಾರತ ಜೋಡೋ ಯಾತ್ರ ಸಮಯದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ನಾಯಕರುಗಳು ಗ್ರಾಮಕ್ಕೆ ಭೇಟಿ ನೀಡಿ ಗಾಂಧೀಜಿಯವರ ಈ ಕೇಂದ್ರವನ್ನು ಅಭಿವೃದ್ಧಿಪಡಿಸುವ ಮೂಲಕ ಮಹಾತ್ಮ ಗಾಂಧೀಜಿ ಅವರ ಕನಸನ್ನು ಮನಸು ಮಾಡುವುದಾಗಿ ಹೇಳಿದ್ದಾರೆ ಅದೇ ರೀತಿ ಇವತ್ತು ನಮ್ಮ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇತೃತ್ವದಲ್ಲಿ ಅಧಿಕಾರಿಕ ಬಂದಿದ್ದು ಈ ಕೇಂದ್ರದ ಅಭಿವೃದ್ಧಿಗೆ ನಾವು ಕೂಡ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಇಲ್ಲಿ ಕೆಲಸ ಮಾಡುವ ನೇಕಾರರಿಗೆ ಎಲ್ಲ ರೀತಿಯಲ್ಲೂ ಸರ್ಕಾರದಿಂದ ನಿರುವು ದುರಕಿಸಿಕೊಡುವ ಮೂಲಕ ಈ ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಅಭಿವೃದ್ಧಿಪಡಿಸಲು ಮುತ್ತಾಯ ಮಾಡುವ ಮೂಲಕ ಹೆಚ್ಚು ನೆರವು ಕೋರುವುದಾಗಿ ವರುಣ ಮಹೇಶ್ ತಿಳಿಸಿದರು.

ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಯಿ ಚಾಮುಂಡೇಶ್ವರಿ ಆಯಸ್ಸು ಆರೋಗ್ಯ ಮತ್ತಷ್ಟು ಅಧಿಕಾರ ದೊರಕುಂತಾಗಲಿ ಅವರ ಕುಟುಂಬಕ್ಕೂ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು .

ಈ ಸಂದರ್ಭದಲ್ಲಿ ವೀರಶೈವ ಮುಖಂಡರಾದ ಜೀವನದಲ್ಲಿ ಗುರುಸ್ವಾಮಿ ಹನುಮನಪುರ ಮಧು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ್ ಕಲ್ಕುಂದ ರತ್ನ ಶೇಖರ್ ಬದಲಾವಣೆ ಗ್ರಾಮದ ಶಿವಣ್ಣ ಮಹಾದೇವಮೂರ್ತಿ ಸೇರಿದಂತೆ ಅನೇಕ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *