ಬೆಳಕವಾಡಿ ಗ್ರಾಮಕ್ಕೆ ಆಗಮಿಸಿದ ಜನತಾ ಜಲಧಾರೆ ಯಾತ್ರೆ

ಮಳವಳ್ಳಿ :23 ಏಪ್ರಿಲ್ 2022

ರಾಷ್ಟ್ರೀಯ ಪಕ್ಷಗಳಿಗೆ ಮತ ನೀಡಿ ಅಧಿಕಾರ ಕೊಟ್ಟಿದ್ದರ ಫಲವಾಗಿ ಕುಡಿಯುವ ನೀರಿಗೂ ರಾಜ್ಯದ ಜನತೆ ಕೇಂದ್ರ ಸರ್ಕಾರದ ಮುಂದೆ ಭಿಕ್ಷೆ ಬೇಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಡಾ. ಕೆ ಅನ್ನದಾನಿ ವಿಷಾದಿಸಿದ್ದಾರೆ .

ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ಇಂದು ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ತಮಿಳುನಾಡು ಕೇರಳ ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬಂದ ಪರಿಣಾಮವಾಗಿ ತಮ್ಮ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ರಾಷ್ಟ್ರೀಯ ಪಕ್ಷಗಳಿಗೆ ಮತ ನೀಡಿದ ಫಲವಾಗಿ ಕುಡಿಯುವ ನೀರಿಗೂ ಭಿಕ್ಷೆ ಬೇಡುವ ಸ್ಥಿತಿ ನಿರ್ಮಾಣ ವಾಗಿದೆ ಎಂದರು .


ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕುಮಾರಸ್ವಾಮಿಯವರು ಜನತಾ ಜಲಧಾರೆಯನ್ನು ಆರಂಭಿಸಿದ್ದು ಈ ಬಾರಿಯಾದರೂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷಕ್ಕೆ ಪೂರ್ಣಪ್ರಮಾಣದ ಅಧಿಕಾರ ನೀಡುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸುವಂತೆ ಅವರು ಜನರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜೆ.ಡಿ.ಎಸ್. ಪಕ್ಷದ ಜಿಲ್ಲಾಧ್ಯಕ್ಷ ಡಿ.ರಮೇಶ್. ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಗೌಡ, ಯುವ ಜೆಡಿಎಸ್ ಘಟಕದ ಅಧ್ಯಕ್ಷ ಚಂದಹಳ್ಳಿ ಶ್ರೀಧರ್ , ಎಸ್ಸಿ ಘಟಕದ ಅಧ್ಯಕ್ಷ ಕಲ್ಕುಣಿ ನಂಜುಂಡಸ್ವಾಮಿ, ಪುರಸಭೆ ಉಪಾಧ್ಯಕ್ಷ ನಂದಕುಮಾರ್, ಮಾಜಿ ಅಧ್ಯಕ್ಷ ದೊಡ್ಡಯ್ಯ ಮಾಜಿ ಜಿಪಂ ಸದಸ್ಯರಾದ ಬಿ. ರವಿ, ಬೆಳಕವಾಡಿ ಗ್ರಾ ಪಂ ಅಧ್ಯಕ್ಷೆ ಕೆ.ಟಿ. ಉಮಾ ಉಪಾಧ್ಯಕ್ಷ ಗಿರೀಶ್, ಪುರಸಭೆ ಸದಸ್ಯ ಸಿದ್ಧರಾಜು, ಟಿಎಪಿಸಿಎಂಎಸ್ ನಿರ್ದೇಶಕ ರಾಜೇಶ್ ಮುಖಂಡರಾದ ಬಿ.ಎಂ
ಕಾಂತರಾಜು, ಗ್ರಾ.ಪಂ.ಸದಸ್ಯರುಗಳು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *