ಮೈಸೂರು:23 ಡಿಸೆಂಬರ್ 2021
ನಂದಿನಿ
ಕನ್ನಡ ಬಾವುಟ ದಹಿಸಿ, ಬೆಳಗಾವಿಯಲ್ಲಿ ಸಂಗೊಳ್ಳಿರಾಯಣ್ಣ ಅವರ ಪ್ರತಿಮೆಯನ್ನು ಭಗ್ನಗೊಳಿಸಿದ ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳಿದ ಎಂಇಎಸ್ ದೇಶದ್ರೋಹಿಗಳ ವಿರುದ್ದ ನಾಳೆ ಬೆಳಿಗ್ಗೆ 9 ಗಂಟೆಗೆ ಇಲ್ಲಿನ ಕೋಟೆ ಆಂಜನೇಯಸ್ವಾಮಿ ದೇಗುಲದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೊಸಮಠದ ಚಿದಾನಂದಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಕನ್ನಡ ಚಳವಳಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಣ್ಣ ಹೇಳಿದರು.
ಸಮಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣನವರ ಪ್ರತಿಮೆಗೂ ಹಾನಿ ಮಾಡಿದ್ದಾರೆ. ಪಕ್ಷಬೇಧ ಮರೆತು ಎಲ್ಲರೂ ಈ ಘಟನೆಗಳನ್ನು ಖಂಡಿಸಿದ್ದಾರೆ. ಆದರೆ ದೇಶಪ್ರೇಮದ ಬಗ್ಗೆ ಹೆಚ್ಚು ಮಾತನಾಡುವ ಬಿಜೆಪಿ ಇಂತಹ ರಾಷ್ಟ್ರದ್ರೋಹದ ಘಟನೆ ಕುರಿತು ಗಂಭೀರವಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.
ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು, ಪ್ರತಿಮೆ ಭಗ್ನಗೊಳಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪಾಲಿಕೆ ಸದಸ್ಯ ಗೋಪಿ, ಸಂಘದ ನಿರ್ದೇಶಕರಾದ ರೇಖಾ ಹಾಗೂ ಅಭಿಲಾಷ್ ಇದ್ದರು.