ಕಾಂಗ್ರೆಸ್ ಪಕ್ಷ ಪೌರಕಾರ್ಮಿಕರನ್ನು ಖಾಯಂ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಶುದ್ಧ ಸುಳ್ಳು,ಪ್ರಣಾಳಿಕೆಯೇ ಬೋಗಸ್: ಕೋಟೆ ಎಂ. ಶಿವಣ್ಣ

ನಂದಿನಿ ಮೈಸೂರು

ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 25,000 ಮಂದಿ ಪೌರಕಾರ್ಮಿಕರನ್ನು ಕಾಯಂ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಶುದ್ಧ ಸುಳ್ಳು,ಪ್ರಣಾಳಿಕೆಯೇ ಬೋಗಸ್ ಆಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ. ಶಿವಣ್ಣ ಕಿಡಿಕಾರಿದರು.

ಗುರುವಾರ ಮೈಸೂರಿನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರ ದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯೇ ಬೋಗಸ್ ಆಗಿದೆ. ಪೌರಕಾರ್ಮಿಕರ ಬಗ್ಗೆ ನೀಡಿರುವ ಭರವಸೆಗಳೇ ಹಸಿ ಸುಳ್ಳಿನಿಂದ ಕೂಡಿದೆ.ಭರವಸೆಯನ್ನು ನೀಡುವ ಮೊದಲು ವಸ್ತು ಸ್ಥಿತಿಯನ್ನು ತಿಳಿದುಕೊಂಡಿಲ್ಲ, ಯಾರೋ ಹೇಳಿದ್ದನ್ನೇ ನಂಬಿ, ಪೌರಕಾರ್ಮಿಕರಿಗೆ ಸುಳ್ಳು ಭರವಸೆಯನ್ನು ನೀಡಿದ್ದಾರೆ. ಹಾಗಾಗಿ ಕಾಂಗ್ರೆಸ್ ನವರ ಪ್ರಣಾಳಿಕೆ ಹಾಗೂ ಗ್ಯಾರಂಟಿ ಭರವಸೆ ಗಳು ಸುಳ್ಳಿನಿಂದ ಕೂಡಿದೆ. ಸುಳ್ಳುಗಳನ್ನು ಹೇಳುವ ಮೂಲಕ ಕಾಂಗ್ರೆಸ್ ಪೌರ ಕಾರ್ಮಿಕರನ್ನು ಮತ್ತು ದಲಿತ ಸಮುದಾಯವನ್ನು ಯಾಮಾರಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ೫೩ ಸಾವಿರ ಮಂದಿ ಪೌರ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ.ಇವರನ್ನು ಕಾಯಂ ಮಾಡಬೇಕೆಂಬ ಬೇಡಿಕೆ ಬಹಳ ವರ್ಷಗಳಿಂದ ಇತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಕಾಯಂಗೊಳಿಸಲು ದಿಟ್ಟ ನಿರ್ಧಾರವನ್ನು ಕೈಗೊಂಡಿತ್ತು. ಹಾಗಾಗಿ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿದ್ದ ಪೌರಕಾರ್ಮಿಕರಲ್ಲಿ ಮೊದಲ ಹಂತದಲ್ಲಿ 11,133 ಮಂದಿ ಪೌರಕಾರ್ಮಿಕರನ್ನು ಖಾಯಂ ಮಾಡಿದೆ. ಎರಡನೇ ಹಂತದಲ್ಲಿ ರೂ.12,300 ಮಂದಿ ಪೌರಕಾರ್ಮಿಕರ ಕೆಲಸವನ್ನು ಖಾಯಂ ಮಾಡಿದೆ. ಮೂರನೇ ಹಂತದಲ್ಲಿ ಬಾಕಿ ಇರುವ ಎಲ್ಲಾ ಪೌರ ಕಾರ್ಮಿಕರ ಕೆಲಸವನ್ನು ಖಾಯಂ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ ಪೌರ ಕಾರ್ಮಿಕರನ್ನು ಪೌರ ನೌಕರರು ಎಂದು ಸರ್ಕಾರದ ನೌಕರರು ಎಂದು ಆದೇಶ ಹೊರಡಿಸಿದೆ. ಅಲ್ಲದೆ ಬೆಂಗಳೂರು ಬಿಬಿಎಂಪಿಯಲ್ಲಿ 15,000 ಪೌರ ಕಾರ್ಮಿಕರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದೆ.ಈಗಾಗಲೇ ಇದರಲ್ಲಿ ನೇರ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂ ಮಾಡಿ, ಖಾಲಿಯಿದ್ದ ಹುದ್ದೆ ಭರ್ತಿ ಮಾಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಪೌರಕಾರ್ಮಿಕರಿಗೆ 2000 ರೂ ಸಂಕಷ್ಟ ಭತ್ಯೆಯನ್ನು ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಾರಿಗೊಳಿಸಿದ್ದಾರೆ. ವಸತಿ ಇಲ್ಲದ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿ ಕೊಡುವುದು, ನಿವೇಶಗಳನ್ನು ನೀಡುವ ಕಾರ್ಯ ನಡೆಯುತ್ತಿದೆ. ರಾಜ್ಯದಲ್ಲಿ ಏಳು ಸಾವಿರ ಮಂದಿ ಮಲ ಹೊರುವ ಪೌರ ಕಾರ್ಮಿಕರನ್ನು ಗುರುತಿಸಲಾಗಿದ್ದು, ಅವರನ್ನು ಆ ಕೆಲಸದಿಂದ ಬಿಡಿಸಿ, ಅವರಿಗೆ ಪುನರ್ವಸತಿ ಕಲಿಸುವ ಕಲ್ಪಿಸಿ ಕೊಡುವ ಮೂಲಕ ಅವರಿಗೆ ಹೊಸದೊಂದು ಜೀವನವನ್ನು ರೂಪಿಸಿಕೊಡಲು ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ. ಅಲ್ಲದೆ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ 5 ಲಕ್ಷದವರೆಗಿನ ಇನ್ಸೂರೆನ್ಸ್ ಅನ್ನು ರಾಜ್ಯದಲ್ಲಿರುವ ಎಲ್ಲಾ ಪೌರಕಾರ್ಮಿಕರಿಗೂ ಮಾಡಿಸಲಾಗಿದೆ.ಇದರಡಿ ಪೌರಕಾರ್ಮಿಕರು ಐದು ಲಕ್ಷ ರೂ ತನಕ ಚಿಕಿತ್ಸೆಯನ್ನು ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ 288 ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇದ್ದ ಪೌರ ಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.ಇದರಿಂದಾಗಿ ಶೇಕಡ 99 ರಷ್ಟು ಹುದ್ದೆಗಳು ಭರ್ತಿಯಾಗಿದೆ.ಸರ್ಕಾರ ಪೌರಕಾರ್ಮಿಕರಿಗಳಿಗೆ ಅಗತ್ಯವಾಗಿರತಕ್ಕಂಥಹ ಎಲ್ಲಾ ಸೌಲಭ್ಯ ಸೌಕರ್ಯಗಳನ್ನು ಕಲ್ಪಿಸಿಕೊಟ್ಟು, ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿಕೊಟ್ಟಿದೆ. ಆದರೆ ಎಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಯಾರದೋ ಮಾತನ್ನು ಕೇಳಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿರುವ 25,000 ಮಂದಿ ಪೌರಕಾರ್ಮಿಕರನ್ನು ಕಾಯಂ ಮಾಡುವುದಾಗಿ,ಹಾಗೂ ಜೀವ ವಿಮೆ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಸರ್ಕಾರ ಎಲ್ಲಾ 53,000 ಮಂದಿ ಪೌರಕಾರ್ಮಿಕರನ್ನು ಕಾಯಂ ಗೊಳಿಸಿರುವುದರಿಂದ, ಕಾಂಗ್ರೆಸ್ ನವರು ಯಾವ ಪೌರಕಾರ್ಮಿಕರನ್ನು ಕಾಯಂ ಮಾಡುತ್ತಾರೆ ಎಂದು ಪ್ರಶ್ನಿಸಿದರು. ಪ್ರಣಾಳಿಕೆಯಲ್ಲಿ ಪೌರಕಾರ್ಮಿಕರಿಗೆ ಕಾಂಗ್ರೆಸ್ ನವರು ಸುಳ್ಳು ಭರವಸೆ ನೀಡುವ ಮೊದಲು ಬಿಜೆಪಿ ಸರ್ಕಾರ ಪೌರಕಾರ್ಮಿಕರಿಗೆ ಏನೆಲ್ಲಾ ಮಾಡಿದೆ ಎಂದು ತಿಳಿದುಕೊಳ್ಳಬೇಕಾಗಿತ್ತು. ನನ್ನನ್ನು ಕೇಳಿದ್ದರೆ ಎಲ್ಲಾ ಅಂಕಿ,ಅಂಶಗಳನ್ನು ನೀಡುತ್ತಿದ್ದೆ. ಆದರೆ ಈ ರೀತಿ ಸುಳ್ಳು ಗಳನ್ನು ಯಾಕೇ ಹೇಳಬೇಕಾಗಿತ್ತು ಎಂದು ಕಿಡಿಕಾರಿದರು.
ಕಾಂಗ್ರೆಸ್ ನವರು ಸುಳ್ಳುಗಳನ್ನು ಹೇಳುವ ಮೂಲಕ ಪೌರಕಾರ್ಮಿಕರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಐದು ವರ್ಷಗಳ ಕಾಲ ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರು ಬಿಬಿಎಂಪಿಯಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ ಹುದ್ದೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಲೇ ಇಲ್ಲ, ಕೇವಲ 3600 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿದರು. ಆದರೆ ಪೌರಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸಲಿಲ್ಲ, ಅವರ ಬೇಡಿಕೆಗಳನ್ನು ಈಡೇರಿಸಲಿಲ್ಲ. ಕಾಂಗ್ರೆಸ್ 60 ವರ್ಷಗಳ ಕಾಲ ಆಡಳಿತ ನಡೆಸಿದರೂ ದಲಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ ವಿನಹ ದಲಿತರ ಉದ್ಧಾರಕ್ಕಾಗಿ ಯಾವುದೇ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಮಾಡಲೇ ಇಲ್ಲ. ಕಾಂಗ್ರೆಸ್ ಸರ್ಕಾರಗಳಿಂದ ದಲಿತರ ಉದ್ಧಾರ ಆಗಲೇ ಇಲ್ಲ. ಬರೀ ಸುಳ್ಳುಗಳನ್ನು ಹೇಳಿಕೊಂಡು ದಲಿತರನ್ನು ಯಾಮಾರಿಸುವ ಪ್ರಯತ್ನವನ್ನು ಮಾಡಿಕೊಂಡು ಬರುತ್ತಿದ್ದಾರೆ. ಈಗಿರುವ ಕಾಂಗ್ರೆಸ್ ಬರಿ ಸುಳ್ಳುಗಳನ್ನು ಹೇಳುವ ಪಕ್ಷವಾಗಿದೆ ಎಂದು ಆರೋಪಿಸಿದ್ದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಮೈಸೂರು ನಗರ ಪಾಲಿಕೆ ಮೇಯರ್ ಶಿವಕುಮಾರ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಡಾ.ಕೆ.ವಸಂತಕುಮಾರ್, ಬಿಜೆಪಿ ಮೈಸೂರು ವಿಭಾಗದ ಮಾಧ್ಯಮ ಸಂಯೋಜಕ ನಾಗೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *