ನಂದಿನಿ ಮೈಸೂರು
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಈ ಬಾರಿ ಮಂಡ್ಯ ಕೇಂದ್ರಿಕೃತವಾಗಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ನಿಂದ ಮಂಡ್ಯ ಜಿಲ್ಲೆಯವರೇ ಅಭ್ಯರ್ಥಿ ಯಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
ಜೆಡಿಎಸ್-ಬಿಜೆಪಿ ಈ ಬಾರಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸಬಹುದು. ಬಿಜೆಪಿ ಜೆಡಿಎಸ್ ಅನ್ನು ಬೆಂಬಲಿಸಬಹುದೆಂದು ಹೇಳಲಾಗಿತಾದರೂ ಇತ್ತೀಚೆಗೆ ಮೈಸೂರಿಗೆ ಶಿಕ್ಷಕರ ಕ್ಷೇತ್ರದ ಚುನಾವಣೆ ತಯಾರಿ ಸಂಬಂಧ ವೀಕ್ಷಕರಾಗಿ ಆಗಮಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಈ ಬಾರಿ ದಕ್ಷಿಣ ಶಿಕ್ಷ ಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಖಾಡ ದಲ್ಲಿರಲಿದ್ದು, ಮೈತ್ರಿ ಸಂಸತ್ ಚುನಾವಣೆಗೆ ಮಾತ್ರ ಆಗಿದ್ದು, ಪರಿಷತ್ ಚುನಾವಣೆಗೆ ಆಗಿಲ್ಲ ಎಂದಿದ್ದರು.
ಬಿಜೆಪಿಯಿಂದ ಈ.ಸಿ.ನಿಂಗರಾಜೇ
ಗೌಡ ?
ಮೈಸೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಈ.ಸಿ.ನಿಂಗರಾಜೇಗೌಡ ಹೆಸರು ಮುಂಚೂಣಿಯಲ್ಲಿದೆ.
ಮೂಲತಃ ಮಂಡ್ಯ ಜಿಲ್ಲೆಯವರಾದ ಗೌಡರು, ಸ್ವಯಂ ಸೇವಕ ಸಂಘ, ಎಜಿ ವಿಪಿ, ಅಖಿಲ ಭಾರತ ಸಾಹಿತ್ಯ ಪರಿಷತ್ ಸೇರಿ ಹಲವು ಸಂಘಟನೆಗಳೊಂದಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದು, ದಕ್ಷಿಣ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಈ ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಪರ ದುಡಿದ ಅನುಭವವಿದೆ. ಇತ್ತೀಚೆಗೆ ನಡೆದ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾ ಗಿದ್ದರೂ ಟಿಕೆಟ್ ಸಿಕ್ಕಿರಲಿಲ್ಲ. ಈ ಬಾರಿಂತು ಚುನಾವಣೆಯಲ್ಲಿ ಸಂಘಟನಾತ್ಮಕವಾಗಿ ಓಡಾಡುತ್ತಿದ್ದು, ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದು, ಚುನಾವಣೆಗೆ ಸಜ್ಜಾಗುತ್ತಿದ್ದಾರೆ.