ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ನಂದಿನಿ ಮೈಸೂರು

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಮೈಸೂರು ನಗರ ಕಾಂಗ್ರೆಸ್ ವತಿಯಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.

ಮೈಸೂರಿನ ಅಂಬೇಡ್ಕರ್ ವೃತ್ತದ ಬಳಿ ಜಮಾಹಿಸಿದ ಪ್ರತಿಭಟನಾಕಾರರು ಬಿಜೆಪಿ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೋಮುವಾದಿಗಳ ಕೈಯಲ್ಲಿ ರಾಜ್ಯ ಸರ್ಕಾರ ಇದೆ.ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಬಿಜೆಪಿ, ಆರ್ ಎಸ್ ಎಸ್ ಸಂಸ್ಕೃತಿ ಏನೆಂದು ನೋಡಬಹುದು.ಮಳೆಹಾನಿಯಿಂದ ಸಂಕಷ್ಟದಲ್ಲಿರುವ ಜನರ ಸಮಸ್ಯೆ ಆಲಿಸಲು ಹೋದವರಿಗೆ ಪಿತೂರಿ ನಡೆಸಿ ಕಾರಿಗೆ ಮೊಟ್ಟೆ ಎಸೆದಿದ್ದಾರೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅದಗೆಟ್ಟಿದೆ.ಗೃಹ ಸಚಿವ ಅರಗ ಜ್ಞಾನೇಂದ್ರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಾಜೇಶ್ ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ರಘು ರಾಜೇ ಅರಸ್,ಉದಯ್ ಕುಮಾರ್,ರಾಕೇಶ್ ಕುಮಾರ್,ಶಿವಾಜಿ ರಾವ್ ಸೇರಿದಂತೆ ಇತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *