ಬ್ಲಿಂಕ್ ಚಿತ್ರದಲ್ಲೊಬ್ಬ “ಆಗಂತುಕ”

ನಂದಿನಿ ಮೈಸೂರು

ಬ್ಲಿಂಕ್ ಚಿತ್ರದಲ್ಲೊಬ್ಬ “ಆಗಂತುಕ”

ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಶ್ರೀಯುತ ರವಿಚಂದ್ರ ಎ ಜೆ ರವರ ನಿರ್ಮಿಸುತ್ತಿರುವ , ಶ್ರೀನಿಧಿ ಬೆಂಗಳೂರು ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ ಚಿತ್ರ “ಬ್ಲಿಂಕ್” ಈಗಾಗಲೇ ಎಲ್ಲಾ ಕೆಲಸಗಳನ್ನು ಮುಗಿಸಿ ಬೆಳ್ಳಿಪರದೆಗೆ ಬರಲು ಸಜ್ಜಾಗಿದೆ..
ಈ ನಿಟ್ಟಿನಲ್ಲಿ ಚಿತ್ರದ ಮೊದಲನೇ ಹಾಡನ್ನು ಸ್ವಾತಂತ್ರ ದಿನದಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.. ಇದು ರಾಪ್ ಶೈಲಿಯ ಹಾಡಗಿದ್ದು ಭಾರತದ ಪಾರಂಪರಿಕ ಸಂಗೀತವನ್ನು ಒಳಗೊಂಡಿದೆ ..
ನಮ್ಮ ಮಣ್ಣಿನ ಪ್ರಖ್ಯಾತ ರಾಪರ್ ಆದ ಅನೂಪ್ ( ಕಾಟಕೊಡು) ಇವರು ರಾಪ್ ಭಾಗವನ್ನು ಅತ್ಯುತ್ತಮವಾದ ಸಾಹಿತ್ಯದ ಜೊತೆಗೆ ಅವರ ದನಿಯ ಮೂಲಕ ಮೆರಗು ನೀಡಿದ್ದಾರೆ.. ಬ್ಲಿಂಕ್ ಚಿತ್ರದ ಸಂಗೀತ ನಿರ್ದೇಶಕರಾದ ಪ್ರಸನ್ನ ಕುಮಾರ್ ಎಂ ಎಸ್ ರವರು ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ..ಕೌಮುದಿಯವರು ಈ ಹಾಡಿಗೆ ದನಿಯಾಗುವ ಮೂಲಕ ಕನ್ನಡ ನಾಡಿನ ಜನತೆಗೆ ಪರಿಚಯವಾಗಲಿದ್ದಾರೆ..
ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ದೀಕ್ಷಿತ್ ಶೆಟ್ಟಿ , ಚೈತ್ರ ಜೆ ಆಚಾರ್ , ಮಂದಾರ ಬಟ್ಟಲಹಳ್ಳಿ , ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು, ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ , “ಆಗಂತುಕ” ಶೀರ್ಷಿಕೆಯೊಂದಿಗೆ ಹೊರ ಬರುತ್ತಿರುವ ಈ ಹಾಡು ಆಗಸ್ಟ್ 15 ರಂದು ಲಾಲ್ ಭಾಗ್ ನಲ್ಲಿ ಪುಷ್ಪ ಪ್ರದರ್ಶನದಲ್ಲಿ ಬಿಡುಗಡೆಯಾಗಿ ಜನರ ಮನಸ್ಸಿಗೆ ಮುಟ್ಟಲು ಸಜ್ಜಾಗಿದ್ದು ” ಬ್ಲಿಂಕ್ ” ಚಿತ್ರತಂಡ ಎಲ್ಲರ ಬೆಂಬಲವನ್ನು ಅಪೇಕ್ಷಿಸುತ್ತಿದೆ..

Leave a Reply

Your email address will not be published. Required fields are marked *