ಮೈಸೂರು:16 ಡಿಸೆಂಬರ್ 2021
ನಂದಿನಿ
ರಾತ್ರೋರಾತ್ರಿ ಜೆಸಿಬಿ ಚಾಲಕನೋಬ್ಬನನ್ನು ಮನಸೋ ಇಚ್ಛೆ ಚಾಕುವಿನಿಂದ ಚುಚ್ಚಿ ಕೊಲೆಗೈದಿರುವ ಘಟನೆ ಮೈಸೂರು ತಾಲ್ಲೂಕಿನ ರಮ್ಮನಹಲ್ಲಿ ಗ್ರಾಮದಲ್ಲಿ ನಡೆದಿದೆ.
ಅರ್ಜುನ್(24) ಕೊಲೆಯಾದ ಯುವಕನಾಗಿದ್ದು, ಜೆಸಿಬಿ ವಾಹನ ಚಾಲಕನಾಗಿದ್ದನು.
ರಾತ್ರಿ ಫೋನ್ ಮಾಡಿ ಕರೆಸಿಕೊಂಡು ಕೊಲೆ ದುಷ್ಕರ್ಮಿಗಳು ಮಾಡಿದ್ದಾರೆ ಎನ್ನಲಾಗಿದೆ.
ಪರಿಚಯಸ್ಥರೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು,
ಗ್ರಾಮದ ಹೊರ ವಲಯಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎಂಬುದು ಕಂಡು ಬಂದಿದೆ.
ಚಾಕುವಿನಿಂದ ಮನಬಂದಂತೆ ಚುಚ್ಚಿ ಅಟ್ಟಾಡಿಸಿ ಕೊಂದು, ಕೊನೆಗೆ ಹಳ್ಳಕ್ಕೆ ತಳ್ಳಿ ತಲೆ ಮೇಲೆ ಕಲ್ಲು ಎತ್ತಿ ಹಾಕಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ.ಸ್ಥಳಕ್ಕೆ ಅಡಿಷನಲ್ ಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಆರ್ ಆಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.