ಶ್ರೀ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಪ್ರಯುಕ್ತ ಕ್ಯಾಲೆಂಡರ್,ಪಂಚಾಂಗ ಬಿಡುಗಡೆ

ನಂದಿನಿ ಮೈಸೂರು

ಕ್ಯಾಲೆಂಡರ್,ಪಂಚಾಂಗ ಬಿಡುಗಡೆ
ಮೈಸೂರು: ಚಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಗೆ ವಿಶೇಷ ಪೂಜಾ- ಕೈಂಕರ್ಯ ನೆರವೇರಿಸಿ.ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಇದೇ ವೇಳೆ ದೇವಾಲಯದ ವತಿಯಿಂದ ಹೊರತರಲಾಗಿರುವ ನೂತನ ಸಂವತ್ಸರದ ಕ್ಯಾಲೆಂಡರ್ ಹಾಗೂ ಪಂಚಾಂಗವನ್ನು ಡಾ.ನಯನಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀಯುತ ಕುಮಾರ್ ದಂಪತಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ, ಆಡಳಿತಾಧಿಕಾರಿ ಡಾ.ಎನ್.ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *