ನಂದಿನಿ ಮನುಪ್ರಸಾದ್ ನಾಯಕ್
ಸಮೃದ್ಧಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಕ್ಯಾಲೆಂಡರ್ ವಿತರಣೆ
ಮೈಸೂರಿನ ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ ಸಮೃದ್ಧಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಯಿತು.
ಸಮಾಜ ಸೇವೆಯ ಭಾಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕ್ಯಾಲೆಂಡರ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಅವರು ಟ್ರಸ್ಟ್‌ನ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಸಮೃದ್ಧಿ ಟ್ರಸ್ಟ್ ಸಂಸ್ಥಾಪಕಿ ಸಹನಾ ಗೌಡ ಅವರು, “ವಿದ್ಯಾರ್ಥಿಗಳ ಶಿಕ್ಷಣೋತ್ಸಾಹ ಹೆಚ್ಚಿಸಲು ಹಾಗೂ ಉತ್ತಮ ಸಂಸ್ಕಾರಗಳನ್ನು ಬೆಳೆಸಲು ಇಂತಹ ಸಣ್ಣ ಪ್ರಯತ್ನಗಳು ಸಹಕಾರಿಯಾಗುತ್ತವೆ. ಮುಂದೆಯೂ ವಿದ್ಯಾರ್ಥಿಗಳ ಹಿತಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮತ್ತು ಯೋಗ ನರಸಿಂಹಸ್ವಾಮಿ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್, ಸಮೃದ್ಧಿ ಟ್ರಸ್ಟ್ ಸಂಸ್ಥಾಪಕಿ ಸಹನಾ ಗೌಡ ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.