ನಂದಿನಿ ಮೈಸೂರು
*ಸೈಬರ್ ಅಪರಾಧ ಮಾಹಿತಿ ಒಳಗೊಂಡ ಕ್ಯಾಲೆಂಡರ್*
*ಸೈಬರ್‌ವಂಚನೆ ಜಾಗೃತರಾಗಿ:ಎ ಎನ್ ಪ್ರಕಾಶ್ ಗೌಡ*
ಮೈಸೂರು:ಸಾರ್ವಜನಿಕರು, ಅದರಲ್ಲೂ ಮುಖ್ಯಮವಾಗಿ ಯುವ ಸಮುದಾಯ ಸೈಬರ್ ವಂಚನೆ ಬಗ್ಗೆ ಜಾಗೃತವಾಗಿರಬೇಕು’ ಎಂದು ಪ್ರಸ್ತುತ ಕರ್ನಾಟಕ ಆಂತರಿಕ ಭದ್ರತಾ ವಿಭಾಗ (ISD) ಹಾಗೂ ಪೊಲೀಸ್ ಅಧೀಕ್ಷಕರು(SP) ಡಾಕ್ಟರ್ ಎ ಎನ್ ಪ್ರಕಾಶ್ ಗೌಡ
ಸಲಹೆ ನೀಡಿದರು.
ಸೈಬರ್ ಅಪರಾಧ, ಅದರಿಂದ ಪಾರಾಗುವ ಬಗೆಯ ಕುರಿತು ಜನರಿಗೆ ಉಪಯುಕ್ತ ಮಾಹಿತಿ ಒಳಗೊಂಡ ಕೆ ಎಂ ಪಿ ಕೆ ಟ್ರಸ್ಟ್ ಹೊರತಂದ 2025ರ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು
ದೇಶದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ.
ಅದರಲ್ಲೂ ವಿದ್ಯಾವಂತ ಜನರೇ ಇದರಲ್ಲಿ ಹೆಚ್ಚಾಗಿ ಮೋಸ ಹೋಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಣ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರಲ್ಲೂ ಡಿಜಿಟಲ್ ಕ್ರೈಂಗಳ ಜಾಗೃತಿ ಅಗತ್ಯವಾಗಿದೆ ,
ದುಡಿಯದೆ ಅತಿ ಹೆಚ್ಚು ಹಣ ಗಳಿಸುವ, ಆಫರ್‌ನಲ್ಲಿ ಅತಿ ಹೆಚ್ಚಿನ ಲಾಭ ಪಡೆಯುವ ದುರಾಸೆಗೆ ಸಿಲುಕಿರುವ ಜನರೇ ಹೆಚ್ಚಿನ ಪ್ರಮಾಣದಲ್ಲಿ ಸೈಬರ್ ವಂಚನೆ ಜಾಲದಲ್ಲಿ ಸಿಲುಕುತ್ತಿದ್ದಾರೆ.
ಪದವಿ ಹಂತದ ವಿದ್ಯಾರ್ಥಿಗಳು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಗಳ ಜೊತೆಯಲ್ಲಿ ಗೆಳೆತನ ಮಾಡಿ ವೈಯಕ್ತಿಕ ಹಾಗೂ ಆರ್ಥಿಕ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ತೊಂದರೆಗೆ ಸಿಲುಕುತ್ತಿದ್ದಾರೆ ಎಂದರು.
ಶಾಪಿಂಗ್ ಮಾಲ್ ಹಾಗೂ ಎಲ್ಲೆಂದರಲ್ಲಿ ಅಪರಿಚತರಿಗೆ ಫೋನ್ ನಂಬರ್, ಇಮೇಲ್ ಐಡಿ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಎಟಿಎಂ ಪಿನ್, ಇಂಟರ್‌ನೆಟ್ ಬ್ಯಾಂಕಿಂಗ್ ಪಾಸ್‌ವರ್ಡ್ಗಳ ಬಗ್ಗೆ ಮಾಹಿತಿ ನೀಡಬಾರದು.
ವೈಯಕ್ತಿಕ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಫೋನ್ ಮಾಡುವ ವ್ಯಕ್ತಿಗಳ ಜೊತೆಗೆ ಯಾವತ್ತೂ ವಯಕ್ತಿಕ ವಿವರ ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದರು. ಜಾಗೃತಿ ಮೂಡಿಸುತ್ತಿರುವ ಕೆ ಎಂ ಪಿ ಕೆ ಟ್ರಸ್ಟ್ ಕೆಲಸ ಶ್ಲಾಘನೀಯ ಎಂದು ಹೇಳಿದರು
ಇದೆ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ, ದುರ್ಗಾ ಪ್ರಸಾದ್, ಬಾಲಾಜಿ, ಸಚಿನ್ ನಾಯಕ್, ಹಾಗೂ ಇನ್ನಿತರರು ಹಾಜರಿದ್ದರು.