ಮೈಸೂರು:7 ನವೆಂಬರ್ 2021
ನಂದಿನಿ
ಮಳೆಯ ಅಬ್ಬರ ದಿನೇ ದಿನೇ
ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದ್ದು ಲೋಕೋಪಯೋಗಿ ಇಲಾಖೆಯ ಸಚಿವರು ಸ್ಥಳಕ್ಕೆ ಭೇಟಿ ನೀಡದಿರೋದನ್ನ ವಿರೋಧಿಸಿ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರಿನ ನ್ಯಾಯಾಲಯ (ಕೋರ್ಟ್) ದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ, ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ,ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವರಹಳ್ಳಿ ಎಂ ರಾಮಕೃಷ್ಣ,ಪ್ರಭಾಕರ್ ಹುಣಸೂರ್,ಶ್ರೀಧರ್ ,ಮಂಜುನಾಥ್,ಬಂಡಳ್ಳಿ ಕುಮಾರ್,ಚನ್ನನಾಯಕ,ಎಸ್ ಟಿ ವಿಭಾಗದ ನಗರಾಧ್ಯಕ್ಷ
ರೋಹಿತ್.ಎಸ್ ಸೇರಿದಂತೆ ಹಲವಾರು ಭಾಗಿಯಾಗಿದ್ದರು.