ಮೈಸೂರು:22 ಜುಲೈ 2022
ನಂದಿನಿ ಮೈಸೂರು
ಕಡೇ ಆಷಾಢ ಶುಕ್ರವಾರದಂದು ಶ್ರೀ ಚಾಮುಂಡೇಶ್ವರಿ ತಾಯಿ ಸಿಂಹವಾಹಿನಿ ಅಲಂಕಾರದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರಿಗೆ
ದರ್ಶನ ಕರುಣಿಸಿದ್ದಾಳೆ.
ಚಾಮುಂಡಿ ಬೆಟ್ಟದಲ್ಲಿ ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ದೇವಾಲಯದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ರವರು ಅಭಿಷೇಕ ಹಾಗೂ ವಿಶೇಷ ಪೂಜೆ ಕೈಂಕರ್ಯ ನೆರವೇರಿಸಿದ್ದಾರೆ.
ಕಮಲ,ಸೇವಂತಿ, ಮಲ್ಲಿಗೆ, ಗುಲಾಬಿ, ಜರ್ಬೇರಾ ಸೇರಿದಂತೆ ವಿವಿಧ ಬಗೆಯ ಹೂವುಗಳಿಂದ ದೇವಾಲಯವನ್ನು ಸಿಂಗರಿಸಲಾಗಿದೆ. ಕಡೇ ಆಷಾಢ ಶುಕ್ರವಾರ ಹಿನ್ನೆಲೆ ಭಕ್ತರು ಬಸ್ ಹಾಗೂ ಮೆಟ್ಟಿಲು ಹತ್ತಿ ಬಂದು ತಾಯಿಯ ದರ್ಶನ ಪಡೆದಿದ್ದಾರೆ. ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 9.30ರವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಭಕ್ತರ ನೂಕು ನುಗ್ಗಲು ತಡೆಯಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.