ನಂದಿನಿ ಮೈಸೂರು
ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಪೂಜೆ ಮಾಡಿದ್ರೆ ಸಕಲ ಇಷ್ಟಾರ್ಥ ಈಡೇರುತ್ತೆ ಎಂದು ಪುರಾಣ ಕಾಲದಿಂದಲೂ ನಂಬಲಾಗಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಕೆ ನೀಡುತ್ತಿದ್ದಾರೆ. ದೇವಸ್ಥಾನದಲ್ಲಿ ಬಗೆಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ.
ಮೂರನೇ ಆಶಾಢ ಶುಕ್ರವಾರ ಹಿನ್ನಲೆ ಲಕ್ಷಾಂತರ ಭಕ್ತರು ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದರು.
ಮುಂಜಾನೆಯಿಂದಲೇ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷೀತ್ ನೇತೃತ್ವದಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷವಾಗಿ ಅಭಿಷೇಕ ,ಅರ್ಚನೆ,ಮಹಾಮಂಗಳಾರತಿ ನೆರವೇರಿಸಲಾಯಿತು.
ಮೈಸೂರು ಜಿಲ್ಲಾಡಳಿತದಿಂದ
ಭಕ್ತಾದಿಗಳಿಗೆ ಸರತಿ ಸಾಲಿನಲ್ಲಿ ದರ್ಶನಕ್ಕೆ ಹೋಗುವ ಭಕ್ತರಿಗೆ ನೆರಳಿನ ವ್ಯವಸ್ಥೆ,
ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿತ್ತು.ಹರಕೆ ಹೊತ್ತ ಭಕ್ತರು ಊಟ ವ್ಯವಸ್ಥೆ ಮಾಡಿದ್ದರು. ನೂಕುನುಗ್ಗಲು ಉಂಟಾಗಬಾರದು ಎಂದು ಬ್ಯಾರಿಕೇಡ್ ವ್ಯವಸ್ಥೆ. ಸಿಸಿಟಿವಿ ಅಳವಡಿಕೆ, ಅಶ್ವದಳ ಪೋಲಿಸ್ ಸಿಬ್ಬಂದಿ,
ದೇವಸ್ಥಾನ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.
ಟ್ರಾಫಿಕ್ ಉಂಟಾಗದಂತೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.ಮೈಸೂರಿನ ಹೆಲಿಪ್ಯಾಡ್ ನಿಂದ ಭಕ್ತರಿಗಾಗಿ ಉಚಿತವಾಗಿ ಸಾರಿಗೆ ವ್ಯವಸ್ಥೆ
ಮಾಡಲಾಗಿದೆ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಮೈಸೂರು ಜಿಲ್ಲಾಡಳಿತ ಆದಷ್ಟು ಪ್ಲಾಸ್ಟಿಕ್‍ನ್ನು ಬಳಸದೆ ಆಷಾಢ ಆಚರಿಸುವ ಪಣ ತೊಟ್ಟಿದ್ದಾರೆ.