ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ

ನಂದಿನಿ ಮನುಪ್ರಸಾದ್ ನಾಯಕ್

*ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ*


ಮೈಸೂರು- ಆಷಾಢ ಮಾಸದ ಶುಕ್ರವಾರಗಳ ಹಿನ್ನೆಲೆಯಲ್ಲಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ಸುರಕ್ಷಿತ, ಶಾಂತಿಯುತ ಮತ್ತು ಸುಗಮ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತವು ವಿಶೇಷ ಸಂಚಾರ ಮತ್ತು ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಿದೆ.

ಶಿಷ್ಟಾಚಾರದ ವ್ಯಾಪ್ತಿಗೆ ಒಳಪಡುವ ವಾಹನಗಳನ್ನು ಹೊರತುಪಡಿಸಿ, ಉಳಿದ ಯಾವುದೇ ಇತರೆ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳಿಗೆ ಅಷಾಢ ಶುಕ್ರವಾರ ಚಾಮುಂಡಿ ಬೆಟ್ಟ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ವಾಹನ ಪ್ರವೇಶಕ್ಕೆ ಸಂಬAಧಿಸಿದAತೆ ಸಲ್ಲಿಸಲಾಗುವ ಯಾವುದೇ ರೀತಿಯ ಶಿಫಾರಸ್ಸು ಪತ್ರಗಳನ್ನು ಪರಿಗಣಿಸುವುದಿಲ್ಲ ಮತ್ತು ಅವುಗಳ ಆಧಾರದ ಮೇಲೆ ಪ್ರವೇಶಾವಕಾಶ ನೀಡುವುದಿಲ್ಲ. ಭಕ್ತರಿಗೆ ಅನುಕೂಲವಾಗುವಂತೆ ಹಾಗೂ ದರ್ಶನ ವ್ಯವಸ್ಥೆಯನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಮತ್ತು ಭಕ್ತಾದಿಗಳು ಜಿಲ್ಲಾಡಳಿತದ ನಿಯಮಾವಳಿಗಳಿಗೆ ಬದ್ಧರಾಗಿ ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಜಿ.ಲಕ್ಷಿö್ಮಕಾಂತರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *