ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಅಮಿತ್ ಶಾ

ನಂದಿನಿ ಮೈಸೂರು

ಮೈಸೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನವನ್ನು ಪಡೆದರು.

ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಅವರನ್ನು ಶಾಸಕ ರಾಮದಾಸ್, ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮೈಸೂರು ನಗರ ಕಾರ್ಯಧ್ಯಕ್ಷ ಹೆಚ್.ಜಿ. ಗಿರಿಧರ್, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಮೈಸೂರು ನಗರ ಪಾಲಿಕೆ ಮೇಯರ್ ಶಿವಕುಮಾರ್ ಪುಷ್ಪಗುಚ್ಚ ನೀಡುವ ಮೂಲಕ ಸ್ವಾಗತಿಸಿದರು. ಈ ವೇಳೆ ಶಾಸಕ ಎಸ್.ಎ.ರಾಮದಾಸ್ ಅವರನ್ನು ಆತ್ಮೀಯವಾಗಿ ಆಲೋಗಿಸಿಕೊಂಡ ಅಮೀತ್ ಶಾ, ಹೇಗಿದ್ದೀರಿ, ಚೆನ್ನಾಗಿದ್ದೀರಾ ಎಂದು ಕುಶಲೋಪರಿ ವಿಚಾರಿಸಿ, ಬೆನ್ನು ತಟ್ಟಿದರು. ಬಳಿಕ ನನ್ನ ಜೊತೆ ಬನ್ನಿ ಎಂದು ಎಸ್.ಎ.ರಾಮದಾಸ್ ರನ್ನು ಕಾರಿನಲ್ಲಿ ಕರೆದುಕೊಂಡು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು.ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಅವರು ಸ್ವಾಗತಿಸಿ ದೇವಸ್ಥಾನದೊಳಗೆ ಕರೆದುಕೊಂಡು ಹೋಗಿ ದೇವರ ದರ್ಶನ ಮಾಡಿಸಿದರು. ಸುಮಾರು 15 ನಿಮಿಷಗಳ ಕಾಲ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ ಅವರು, ಪ್ರಾರ್ಥನೆಯನ್ನು ಸಲ್ಲಿಸಿದರು.ಬಳಿಕ ಅಲ್ಲಿಂದ ಮತ್ತೆ ಮಂಡಕಳ್ಳಿ ವಿಮಾನ ನಿಲ್ದಾಣ ಕ್ಕೆ ತೆರಳಿ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣಕ್ಕೆ ತೆರಳಿದರು ಅಲ್ಲಿಂದ ಭರ್ಜರಿ ರೋಡ್ ಶೋ ವನ್ನು ನಡೆಸಲಿದ್ದಾರೆ.

Leave a Reply

Your email address will not be published. Required fields are marked *