ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ:ತುರ್ತಾಗಿ ಕ್ರಮ ಕೈಗೊಳ್ಳಲು ಸಚಿವರಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಮೈಸೂರು:21 ಅಕ್ಟೋಬರ್ 2021

ನ@ದಿನಿ

ಚಾಮುಂಡಿ ಬೆಟ್ಟದಲ್ಲಿ ನಂದಿ ಮೂಲಕ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿರುವುದರಿಂದ ಕೂಡಲೇ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಹಾಗೂ ಆರ್.ಸಿ.ಸಿ.ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಅಂದಾಜು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಶಾಸಕ ಜಿ.ಟಿ.ಡಿ. ಅಧಿಕಾರಿಗಳಿಗೆ ಸೂಚಿಸಿದರು.

ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಉಂಟಾಗಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಜಿಟಿಡಿ.

ಕಳೆದ ಎರಡು ವರ್ಷಗಳು ಹಿಂದೆಯು ಸಹ ಇದೆ ರೀತಿ ಭೂಕುಸಿತ ಚಾಮುಂಡಿಬೆಟ್ಟದ ರಸ್ತೆಯಲ್ಲಿ ಸಂಭವಿಸಿತ್ತು, ಆದ್ದರಿಂದ ಬೆಟ್ಟದಲ್ಲಿ ಈ ರೀತಿಯ ಭೂಕುಸಿತ ಸಂಭವಿಸದಂತೆ ಕ್ರಮ ಕೈಗೊಳ್ಳಲು ತಾಂತ್ರಿಕ ವರದಿಯನ್ನು ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಅಭಿವೃದ್ಧಿ ಗೆ ಮತ್ತು ಆರ್.ಸಿ.ಸಿ.ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವರಲ್ಲಿ ಮಾತ್ತು ಉಸ್ತುವಾರಿ ಸಚಿವರಲ್ಲಿ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಕೃಷ್ಣರೆಡ್ಡಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹರ್ಷ, ಎ.ಇ.ಇ.ರಾಜು ಹಾಜರಿದ್ದರು.

Leave a Reply

Your email address will not be published. Required fields are marked *